ಕರುಣಿಸೊ ಕರುಣಿಸೊ ಗುರುವೆಂಕಟೇಶ ಕರುಣಿಸೆನ್ನ ನೀ ನೋಡೊ ಪರಮ ಪುರುಷ ಪ
ಬಿನ್ನಹವ ಪಾಲಿಸೊ ಚಿನುಮಯ ರೂಪ ಉನ್ನತ ಮಹಿಮ ನೀ ಘನ್ನ ಗುರು ಕೃಪ 1
ಅನಾಥ ಬಂಧು ನೀ ಶರಣ ರಕ್ಷಕ ಅನಂತ ಕೋಟಿ ಬ್ರಹ್ಮಾಂಡ ನಾಯಕ 2
ವಾಸುದೇವ ಚಿದ್ರೂಪ ದೇಶಿಕರದೇವ ಭಾಸಿ ಪಾಲಿಪ 3
ವಂದಿತ ತ್ರೈಲೋಕ್ಯ ವೇದಾಂತ ಮಹಿಮ ಇಂದಿರಾಪತಿ ಘನಗುರುಬ್ರಹ್ಮ 4
ಶ್ರೀನಾಥ ನೀನಲ್ಲದೆ ನನಗಾರು ಇಲ್ಲ ನೀನೆ ಸಕಲಪೂರ್ಣ ಭಕ್ತವತ್ಸಲ 5
ಮತಿಹೀನನವಗುಣ ನೋಡದಿರೆನ್ನ ಕ್ಷಿತಿಯೊಳು ಸದ್ಗೈಸೊ ಪತಿತಪಾವನ 6
ದೀನನಾಥ ನೀ ಬಂದು ಮನದೊಳು ನಿಂದು ಮನ್ನಿಸಿ ದಯಬೀರೊ ಘನಕೃಪಾಸಿಂಧು7
ವಿಶ್ವವ್ಯಾಪಕ ಸಾಧುಹೃದಯನಿವಾಸ ದಾಸ ಮಹಿಪತಿ ಪ್ರಾಣ ಹೊರಿಯೊ ಪ್ರಾಣೇಶ 8
***