Showing posts with label ಕರುಣಿಸೋ ಗುರು ಎನಗೆ ಅರಘಳಿಗಿ ನೀ ಎನ್ನ ಹೃದಯದಿಂದಲಗದ್ಹಾಂಗೆ mahipati. Show all posts
Showing posts with label ಕರುಣಿಸೋ ಗುರು ಎನಗೆ ಅರಘಳಿಗಿ ನೀ ಎನ್ನ ಹೃದಯದಿಂದಲಗದ್ಹಾಂಗೆ mahipati. Show all posts

Wednesday, 1 September 2021

ಕರುಣಿಸೋ ಗುರು ಎನಗೆ ಅರಘಳಿಗಿ ನೀ ಎನ್ನ ಹೃದಯದಿಂದಲಗದ್ಹಾಂಗೆ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಕರುಣಿಸೊ ಗುರು ಎನಗೆ ಅರಘಳಿಗಿ ನೀ ಎನ್ನ ಹೃದಯದಿಂದಲಗದ್ಹಾಂಗೆ ಪ

ಕಣ್ಣಿನೊಳಗ ನಿನ್ನ ಕಾಣದಿದ್ದರೆ ಪೂರ್ಣ ಪ್ರಾಣನಿಲ್ಲದೊ ನಿಮಿಷಾರ್ಧದಲಿ ಕ್ಷಣಕ್ಷಣಕ್ಕೊದಗಿ ನೀ ಖೂನದೋರದಿದ್ದರೆ ತನು ವಿಕಳಿತವಾಗಿ ಕ್ಷೀಣಹೊಂದುವದೊ 1 

ಬೇಡುವದೊಂದೆ ನಾ ಬಿಡದೆ ನಿಜರೂಪ ಪೊಡವಿಯೊಳಗೆ ದೃಢ ನಿಶ್ಚಯಲಿ ಎಡಬಲವು ನೋಡದೆ ಒಡಲ ಹೊಕ್ಕಿದೆ ನಿನ್ನ ಕಡೆಗಾಣಿಸುವದೆನ್ನೊಡೆಯನೆ ಪಿಡಿದು ಕೈಯ 2 

ಸುತ್ತಸೂಸುತಲಿನ್ನು ಚಿತ್ತದಿಂದಗಲದೆ ನಿತ್ಯವಾಗಿರೊ ನೀ ಹೃತ್ಕಮಲದಲಿ ಹೆತ್ತ ತಾಯಿಯೋಪಾದಿ ತುತ್ತುತುತ್ತಿಗೆ ಒಮ್ಮೆ ಹತ್ತಿಲಿದ್ದು ಸಂತತ ಸಲಹೊ ಮಹಿಪತಿಗೆ 3

***