ಕಾಖಂಡಕಿ ಶ್ರೀ ಮಹಿಪತಿರಾಯರು
ಕರುಣಿಸೋ ಸ್ವಾಮಿ ನೀಪೂರ್ಣ ಸಾರಸದ್ಗತಿ ಭೂಷಣಾ ತಾರಿಸೋ ಯನ್ನ ನೀ ಪ್ರಾಣಾ ಶ್ರೀ ಹರಿ ಕಂಜಲೋಚನಾ 1
ಸ್ವಾಮಿ ನೀ ಸರ್ವ ಸಾಕ್ಷಾತಾ ಬ್ರಹ್ಮಾದಿದೇವ ವಂದಿತಾ ಮನೋಹರ ಪ್ರಖ್ಯಾತಾ ನೇಮ ನೀ ಕಾಮ ಪೂರಿತಾ 2
ಹಸ್ತಿಗೊಲಿದ ಸುದಾತಾ ವಸ್ತು ಶ್ರೀದೇವ ನಿಶ್ಚಿತಾ ನಿಸ್ತರಿಸುವಾ ಶ್ರೀನಾಥಾ ಕಸ್ತೂರಿರೇಖಾ ಶೋಭಿತಾ 3
ನೀನೆ ನಮಸ್ತ ಕಾಧಾರಾ ಶ್ರೀನಿಧಿ ಜ್ಞಾನ ಸಾಗರಾ ದೀನ ಜನರ ಮಂದಾರಾ ಪೂರ್ಣಾನಂದದಾಗರಾ 4
ಮಹಿಪತಿ ಸ್ವಾಮಿ ಶ್ರೀಪತಿ ಕಾಯೋ ನೀ ಲಕ್ಷ್ಮೀಪತಿ ಶ್ರೀ ಹರಿ ದಿವ್ಯಸುಮೂರ್ತಿ ದೋರೋ ನೀ ದಿವ್ಯಸಂಗತಿ 5
***