Showing posts with label ಕಲಿಯುಗದ ಮಹಿಮೆಯನು ಕಂಡಷ್ಟು ಪೇಳುವೆನು neleyadikeshava. Show all posts
Showing posts with label ಕಲಿಯುಗದ ಮಹಿಮೆಯನು ಕಂಡಷ್ಟು ಪೇಳುವೆನು neleyadikeshava. Show all posts

Wednesday, 1 September 2021

ಕಲಿಯುಗದ ಮಹಿಮೆಯನು ಕಂಡಷ್ಟು ಪೇಳುವೆನು ankita neleyadikeshava

..

ಕಲಿಯುಗದ ಮಹಿಮೆಯನು ಕಂಡಷ್ಟು ಪೇಳುವೆನು ಪ


ಜಲಜನಾಭನ ಕೃಪೆಯ ಪಡೆದವರು ಕೇಳಿ ಅ


ಸತ್ಯಧರ್ಮಗಳೆಲ್ಲ ಎತ್ತ ಪೋದವೊ ಕಾಣೆಉತ್ತಮರ ಜೀವನಕೆ ದಾರಿಯಿಲ್ಲನಿತ್ಯದಲಿ ಕಳವು ವ್ಯಭಿಚಾರವುಳ್ಳವರೆಲ್ಲಅರ್ಥ ಸಂಪನ್ನರಾಗನುಭವಿಸುತಿಹರು1


ಅತ್ತೆಯೇ ಸೊಸೆಯಾಗಿ ಸೊಸೆಯು ಅತ್ತೆಯು ಆಗಿಪುತ್ರ ಪಿತನಾಗಿ ಪಿತ ಪುತ್ರನಾಗಿಮತ್ತೆ ಗಂಡನಿಗೆ ಹೆಂಡತಿಯೆ ಗಂಡಳು ಆಗಿವರ್ತಿಸುವರಯ್ಯ ತಮಗೆದುರಿಲ್ಲವೆಂದು 2


ವಾವೆವರಸೆಯು ತಪ್ಪಿ ವೈರಿ ವರ್ಗವು ಹೆಚ್ಚಿದೇವ ಬ್ರಾಹ್ಮಣ ಗುರು ಹಿರಿಯರನು ಜರಿದುಕೇವಲಾಧಮರೆಲ್ಲ ಸಿರಿ ಮದದಿ ಸೊಕ್ಕಿದರುಕಾವರಾರೈ ಸಾಧು ಸಜ್ಜನರನೀಗ3


ವೇದ ವಿಪ್ರರು ತಮ್ಮ ವೃತ್ತಿ ಸ್ವಾಸ್ಥ್ಯವ ಕಳೆದುಆಧಾರವಿಲ್ಲದೆ ತಿರಿದು ತಿಂಬುವರುಕಾದುವ ಶೂರರಿಗೆ ಕಾಸು ಕೊಡುವವರಿಲ್ಲಮೇದಿನಿಗೆ ಬೀಳ್ವ ಮಳೆ ಖಂಡಮಂಡಲವು 4


ಅನ್ನವಸ್ತ್ರಗಳಿಂದ ಚೆನ್ನಾಗಿ ಬಾಳುವರಭಿನ್ನ ತಂತ್ರವ ಮಾಡಿ ಕೆಡಿಸುತಿಹರುಗನ್ನಗತಕವ ಮಾಳ್ಪ ಗ್ರಾಮಣ್ಯಗಳ ಕಲಿತುಕುನ್ನಿಗಳು ಹೆಚ್ಚಿದರು ಕ್ರೂರ ಫಣಿಯಂತೆ 5


ಆಳಿದೊಡೆಯಂಗೆರಡು ಬಗೆಯುವಾತಗೆ ಒಳ್ಳೆಮಾಳಿಗೆಯ ಮನೆ ತುರುವು ಧನಧಾನ್ಯವುವೇಳೆವೇಳೆಗೆ ಬರುವ ಹೆಂಡತಿಯ ಲೆಕ್ಕಿಸದೆಸೂಳೆಯನು ನೆಚ್ಚಿ ಕಾಲವ ಕಳೆವರಯ್ಯ6


ಸೇರಿ ದ್ರೋಹವ ಮಾಳ್ಪ ಕ್ರೂರಕರ್ಮಿಗಳ ಮತಪೂರೈಸಿ ಕೊಡುವರರಸುಗಳೆಲ್ಲರುಧಾರಿಣಿಯ ಭಾರವನು ತಾಳಲಾರದೆ ದೇವಿಶ್ರೀರಾಮ ರಾಮೆಂದು ಶಿರವ ತೂಗುವಳು7


ಉತ್ತಮ ಪತಿವ್ರತೆಯು ಪತಿ ನೀನೆ ಗತಿಯೆನಲುಮುತ್ತೈದೆಗುಡುವುದಕೆ ವಸ್ತ್ರವಿಲ್ಲಮತ್ತೆ ವ್ಯಭಿಚಾರಿಣಿಗೆ ತೊಡಿಗೆ ಬಂಗಾರಗಳುವರ್ತನೆಯಿದೇನಯ್ಯ ಕಲಿಯುಗದ ಮಹಿಮೆ 8


ಪತಿವ್ರತೆಯರೆಂಬುವರು ಶತಸಹಸ್ರಕೊಬ್ಬರುಮಿತಿಮೀರಿ ಇಹರಯ್ಯ ಇತರ ಜನರುಮತಿಗೆಟ್ಟು ಮನಸೋತು ಅನ್ಯ ಪುರುಷರ ಕೂಡಿಗತಿಗೆಟ್ಟು ಹೋಗುವರು ಮೂರು ತೊರೆದು 9


ಹರಿಹರರ ಪೂಜೆಗಳು ಹಗರಣಗಳಾದವುಉರಿ ಮಾರಿ ಚಾಮುಂಡಿ ಶಕ್ತಿಗಳಿಗೆಕುರಿ ಕೋಣ ನೈವೇದ್ಯ ಧೂಪದೀಪಗಳಿಂದಪರಮ ಭಕ್ತಿಯ ಸಲಿಸಿ ಪೂಜಿಸುವರಯ್ಯ10


ನಡೆವ ಕಾರ್ಯಗಳೆಲ್ಲ ನುಡಿಯಲೆನ್ನಳವಲ್ಲಒಡೆಯ ನೀನೇ ಬಲ್ಲೆ ಕಲಿಯುಗದ ಮಹಿಮೆತಡವ ಮಾಡಲಿ ಬೇಡ ತಾಳಲಾರದು ಲೋಕಮೃಡನ ವೈರಿಯ ಪೆತ್ತ ಆದಿಕೇಶವನೆ11

***