Showing posts with label ಕಷ್ಟ ಕಷ್ಟವೋ ಕೃಷ್ಣ ದೃಷ್ಟಿಯಲಿ ನೋಡದಿರೆ uragadrivasa vittala. Show all posts
Showing posts with label ಕಷ್ಟ ಕಷ್ಟವೋ ಕೃಷ್ಣ ದೃಷ್ಟಿಯಲಿ ನೋಡದಿರೆ uragadrivasa vittala. Show all posts

Monday, 2 August 2021

ಕಷ್ಟ ಕಷ್ಟವೋ ಕೃಷ್ಣ ದೃಷ್ಟಿಯಲಿ ನೋಡದಿರೆ ankita uragadrivasa vittala

ಕಷ್ಟ ಕಷ್ಟವೋ ಕೃಷ್ಣ ದೃಷ್ಟಿಯಲಿ ನೋಡದಿರೆ

ತುಷ್ಟಿಪಡಿಸಲು ನಿನ್ನ ನಾನೆಷ್ಟರವನಯ್ಯ ಪ


ಭ್ರಷ್ಟನಾಗಿಹೆ ನಾ ಅಷ್ಟಾಂಗಯೋಗವ ತಿಳಿಯೆ ಒಂ-

ದಿಷ್ಟು ಭಕುತಿಯ ಕೊಟ್ಟು ಕಡೆಹಾಯಿಸಯ್ಯ ಅ.ಪ


ಸತ್ಯ ಅಸ್ತೇಯ ಬ್ರಹ್ಮಚರ್ಯ ಅಹಿಂಸಾ

ಧೃತಿ ದಯಾ ಕ್ಷಮಾರ್ಜಿತ ಮಿತಭುಕ್ತವು

ನಿತ್ಯ ಬಾಹ್ಯಾಂತರ ಶೌಚಾದಿ ದಶಗುಣ

ಯುತವಾದಯಮ ಉಪಾಸನೆಗಳಿನಿತಿಲ್ಲವೋ ದೇವಾ 1

ನಿಯಮ ಮೊದಲಿಲ್ಲ ಜಪತಪ ಸಂತೃಪ್ತಿ

ನಿಯತ ಸಿದ್ಧಾಂತ ಶ್ರವಣ ಲಜ್ಜಮತಿಯು

ಶ್ರೀಯಃಪತಿಯ ಪೂಜನ ಆಸ್ತಿಕ್ಯವ್ರತ ದಾನೋ-

ಪಾಯವಿಲ್ಲದೇ ಕಡೆ ಹಾಯ್ವುದೆಂತಯ್ಯ 2

ಘಾಸಿಯಾಗಿಹುದಯ್ಯ ಷಡ್ವಿಧಾಸನಗಳೂ

ಸ್ವಸ್ತಿಕ ಭದ್ರಪದ್ಮ ಅರ್ಧಾಂಗಾಸನದಿ

ಸಿದ್ಧ ಪರ್ಯಂಕಗಳೆಂಬ ಆಸನದಿ ಕುಳಿತು

ನಾ ಧೇನಿಸಲರಿಯೆ ಹರಿಯೇ 3

ಪ್ರಾಣಾಯಾಮವ ಕ್ರಮವು ರೇಚಕ ಪೂರಕವು

ದಣಿವಿಲ್ಲದೆ ಕುಂಭಕದ ಕ್ರಮವಿಲ್ಲ

ತ್ರಾಣವಿಲ್ಲವೋ ವಾಯುಬಂಧ ಮಾಡಲರಿಯೆ

ಪ್ರಾಣಪತಿ ನಿನ್ನ ಕರುಣವಿಲ್ಲದಾತನಕ 4

ವಿಷಯಾಭಿಲಾಷೆಯಿಂದ್ಹರಿದು ಹೋಯಿತು ಮನಸು

ವಿಷಮವಾಗಿಹುದಯ್ಯ ಮತ್ಸಾಧನ

ಹೃಷೀಕಪನೆ ಪ್ರತ್ಯಾಹಾರ ಸಾಧನವಿಲ್ಲ

ಕೃಷಿಮಾಡಿ ಸ್ಥಿರಮನದಿ ಧೇನಿಸಲು ನಾನರಿಯೆ 5

ಧಾರಣೋಪಾಯದೊಳು ಅಣುಮಾತ್ರ ನಾನರಿಯೆ

ನರಕ್ರಿಮಿಯಾಗಿ ನಾ ಧರೆಯೊಳುಳಿದೆ

ಅರಿಯೆ ಬಾಹ್ಯಾಂತರದಿ ಭೂತಪಂಚಕವಿರುವ

ಪರಿ ತಿಳಿದು ಪ್ರಾಣವಾಯು ಸಡಿಲಬಿಡಲರಿಯೆ 6

ಧ್ಯಾನಿಸಲು ಏಕಾಗ್ರಚಿತ್ತವೇ ಎನಗಿಲ್ಲ

ಸಂಸ್ತುತಿಸೆ ಸಂಪ್ರe್ಞÁ ಅಸಂಪ್ರಜ್ಞವೆಂಬ

ಘನಸಮಾಧಿಯೊಳ್ ಪರಿವಿಲ್ಲದಲೆ

ನಿನ್ನ ಕರುಣವೆಂತಾಗುವುದೋ ಶ್ರೀ ವೇಂಕಟೇಶಾ 7

ಶುದ್ಧವಾದ ದ್ವೈತತ್ರಯ ತಿಳಿಯದಲೆ

ಮುಗ್ಧನಾಗಿಹೆ ನಾನಪರಿಶುದ್ಧನೊ

ಶಬ್ದಗೋಚರ ನಿನ್ನ ಪರಿಶುದ್ಧ ಭಾವದಿಂ

ಬುದ್ಧಿಪೂರ್ವಕ ತಿಳಿಯೆ ಬದ್ಧಪಾಮರನಯ್ಯ 8

ಕರಣತ್ರಯದಲಿ ಮಾಳ್ವ ಕ್ರಿಯೆಗಳೆಲ್ಲವು ಸತತ

ಹರಿಯೇ ಬಿಂಬಕ್ರಿಯವ ನಾನರಿಯದೇ

ಕರುಣಶರಧಿಯೆ ನೀ ಕೃಪೆಮಾಡಿ ಪೊರೆಯದಿರೆ

ಉರಗಾದ್ರಿವಾಸವಿಠಲ ನಿನ್ನ್ಹ್ಹೊರತು ಗತಿಯುಂಟೆ 9

****