..
ಕಾಡುವ ದುರಿತಗಳನು ಬಿಡಿಸೆಂದುಬೇಡಿಕೊಂಬೆನೊ ದೇವ ನಾ ನಿನ್ನ ಪ
ಅಡಿದಾಸನೆಂಬೋ ಎನಗೊಂದು ದೃಢ ಬುದ್ಧಿಯು ಇಲ್ಲದೆಮಡದಿ ಮಕ್ಕಳೆಂಬೊ ಕಡಲೊಳು ಮುಳುಗಿದೆಕಡೆ ಹಾಯಿಸೊ ಎನ್ನೊಡೆಯ ನೀನಾದಡೆ 1
ಆಸೆಗಳ ಆಧಿಕ್ಯದಿಂದೀ ಪರಿಯ ಯಮಪಾಶಕ್ಕೆ ಒಳಗಾದೆನೋಮೀಸಲೂಳಿಗವ ಮಾಡದೆಯೆ ಪರಿಪರಿಯಕ್ಲೇಶದಿಂದಲಿ ಗಾಸಿಗೊಂಡೆನಯ್ಯ 2
ಪಾಡುವೆನು ನಿನ್ನ ನಾಮ ಸೀತಾರಾಮಆಡುವೆನು ಮನದಣಿವ ತನಕಬೇಡಿಕೊಂಬೆನೊ ನಿನ್ನ ಭಕ್ತರ ಸೇವೆಯನುಬಾಡದಾದಿಕೇಶವ ಭಕ್ತವತ್ಸಲನೆ3
***