ಕಾಯೊ ಕರುಣಾಕರ ಕೃಪಾಲ ಶ್ರೀ ಗುರು ಎನ್ನ ಕಾಯೊ ದಯದಿಂದೆನ್ನ ಪರಮಪಾವನ ಪ
ಹುಟ್ಟಿಸಿಹ್ಯ ಜೀವನ ಸೃಷ್ಟಿಯೊಳು ನಾ ನಿಮ್ಮ ದೃಷ್ಟಿಸಿ ನೋಡಲು ಎನ್ನ ಕಷ್ಟಪರಿಹಾರ ಶಿಷ್ಟಜನ ಪ್ರತಿಪಾಲ ದುಷ್ಟಜನ ಸಂಹಾರ ಎಷ್ಟೆಂದು ಪೊಗಳಲಯ್ಯ ಕೃಷ್ಣಕೃಪಾಲ 1
ಇನ್ನೊಂದು ಅರಿಯೆ ನಾ ಅನ್ಯಪಥÀವೆಂಬುದನು ನಿನ್ನ ಚರಣಕೆ ಪೂರ್ಣ ನಂಬಿಹ್ಯನು ಭಿನ್ನವಿಲ್ಲದೆ ಎನ್ನ ಚನ್ನಾಗಿ ಸಲಹಯ್ಯ ಧನ್ಯಗೈಸೊ ಪ್ರಾಣ ಚಿನ್ಮಯನೆ 2
ವಾಸನೆಯ ಪೂರಿಸೊ ವಿಶ್ವವ್ಯಾಪಕ ಎನ್ನ ಭಾಸ್ಕರಕೋಟಿ ಪ್ರಕಾಶ ಪೂರ್ಣ ಲೇಸು ಲೇಸಾದಿ ಪಾಲಿಸೊ ವಾಸುದೇವನೆ ದಾಸಾನುದಾಸ ನಿಜದಾಸ ಮಹಿಪತಿಗೆ 3
****