Showing posts with label ಕುಂಜಾರುಗಿರಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರು neleyadikeshava. Show all posts
Showing posts with label ಕುಂಜಾರುಗಿರಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರು neleyadikeshava. Show all posts

Wednesday, 16 October 2019

ಕುಂಜಾರುಗಿರಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರು ankita neleyadikeshava

ರಾಘ : ಕಲ್ಯಾಣಿ ತಾಳ : ಝಂಪೆ 

ಕುಂಜಾರುಗಿರಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರು          
ವರವ ಕೊಡು ಎನಗೆ ವಾಗ್ದೇವಿ ನಿನ್ನ
ಚರಣಕಮಲಂಗಳನ ದಯಮಾಡು ದೇವಿ            ||ಪ||

ಶಶಿ ಮುಖದ ನಸುನಗೆಯ ಬಾಲೆ
ಎಸೆವ ಕರ್ಣದ ಮುತ್ತಿನೋಲೆ
ನಸುನಗುವ ಸುಲಿಪಲ್ಲ ಗುಣಶೀಲೆ ದೇವಿ
ಬಿಸಜಾಕ್ಷಿ ಎನ್ನ ಹೃದಯದೊಳು ನಿಂದು             ||೧||

ಇಂಪು ಸೊಂಪಿನ ಚಂದ್ರಬಿಂಬೆ
ಕೆಂಪು ತುಟಿಗಳ ನಾಸಿಕದ ರಂಭೆ
ಜೋಂಪು ಮದನನ ಪೂರ್ಣಶಕ್ತಿ ಗೊಂಬೆ ಒಳ್ಳೆ
ಸಂಪಿಗೆಯ ಮುಡಿಗಿಟ್ಟು ರಾಜಿಪ ಶಾರದಾಂಬೆ     ||೨||

ರವಿಕೋಟಿ ತೇಜಪ್ರಕಾಶೇ ಮಹಾ
ಕವಿಜನರ ಹ್ರಿತ್ಕಮಲ ವಾಸೇ
ಅವಿರಳಪುರಿಯ ಸಿರಿಕಾಗಿನೆಲೆಯಾದಿ ಕೇ
ಶವನ ಸುತನಿಗೆ ಸನ್ನುತ ರಾಣಿವಾಸೆ                 ||೩||
******