ಕುಲ ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ
ಕುಲದ ನೆಲೆಯನೇನಾದರು ಬಲ್ಲಿರ || ಪ ||
ಹುಟ್ಟಿದ ಯೋನಿಗಳಿಲ್ಲ ಮೆಟ್ಟಿದ ಭೂಮಿಗಳಿಲ್ಲ
ಅಟ್ಟು ಉಣ್ಣದ ವಸ್ತುಗಳಿಲ್ಲ
ಗುಟ್ಟು ಕಾಣಿಸೆ ಬಂತು ಹಿರಿದೇನು ಕಿರಿದೇನು
ನೆಟ್ಟನೆ ಸರ್ವಜ್ಞನ ನೆನೆಕಂಡ್ಯ ಮನುಜ || ೧ ||
ಜಲವೆ ಸಕಲ ಕುಲಕೆ ತಾಯಲ್ಲವೆ
ಜಲದ ಕುಲವನೇನಾದರು ಬಲ್ಲಿರ
ಜಲದ ಬೊಬ್ಬುಳಿಯಂತೆ ಸ್ಥಿರವಲ್ಲವೀ ದೇಹ
ನೆಲೆಯನರಿತು ನೀ ನೆನೆಕಂಡ್ಯ ಮನುಜ || ೨ ||
ಹರಿಯೆ ಸರ್ವೋತ್ತಮ ಹರಿಯೇ ಸರ್ವೇಶ್ವರ
ಹರಿಮಯವೆಲ್ಲವೆನುತ ತಿಳಿದು
ಸಿರಿ ಕಾಗಿನೆಲೆಯಾದಿಕೇಶವರಾಯನ
ಚರಣಕಮಲವ ಕೀರ್ತಿಸುವನೆ ಕುಲಜ || ೩ ||
***
ರಾಗ – ಪಂತುವಳಿ ತಾಳ – ಅಟ್ಟ (raga tala may differ in audio)
Kulakula kulavendu hodedadadiri nimma
Kulada neleyanenadaru ballira ||pa||
Huttada yonigalilla mettada bumigalilla
Attu unnada vastugalillavo
Guttukanise bantu hiridenu kiridenu
Nettane sarvaj~jana nenekamdya manuja ||1||
Jalave sakala kulakke tayiyallave A
Jalada kulavanenadaru ballira
Jalada bobbuliyante sthiravalla I deha
Neleyanaritu ni hariya nene manuja ||2||
Hariye sarvottama hariye sarvesvara
Harimayavellavenuta tilidu
Siri kagineley adikesava rayana
Charanakamalavanu kirtisuvane kulaja ||3||
***
ಕುಲ ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮ
ಕುಲದ ನೆಲೆಯನೇನಾದರೂ ಬಲ್ಲಿರಾ ಬಲ್ಲಿರಾ || ಪಲ್ಲವಿ ||
ಹುಟ್ಟದ ಯೋನಿಗಳಿಲ್ಲ ಮೆಟ್ಟದ ಭೂಮಿಗಳಿಲ್ಲ
ಅಟ್ಟು ಉಣ್ಣದ ವಸ್ತುಗಳಿಲ್ಲ
ಕುಟಕಾಣಿಸ ಬಂದು ಹಿರಿದೇನು ಕಿರಿದೇನು
ನೆಟ್ಟನೆ ಸರ್ವಜ್ಞನ ನೆನೆಕಂಡ್ಯಾ ಮನುಜ || ೧ ||
ಜಲವೆ ಸಕಲ ಕುಲಕ್ಕೆ ತಾಯಲ್ಲವೆ
ಜಲದ ಕುಲವನೇನಾದರೂ ಬಲ್ಲಿರಾ
ಜಲದೊಕುಳಿಯಂತೆ ಸ್ಥಿರವಲ್ಲ ಈ ದೇಹ
ನೆಲೆಯ ಅರಿತು ನೀ ನೆನೆಕಂಡ್ಯಾ ಮನುಜ || ೨ ||
ಹರಿಯೇ ಸರ್ವೋತ್ತಮ ಹರಿಯೇ ಸರ್ವೇಶ್ವರ
ಹರಿಮಯವೆಲ್ಲವೆನುತ ತಿಳಿದು
ಸಿರಿಕಾಗಿನೆಲೆಯಾದಿ ಕೇಶ
ವರಾಯನ ಚರಣ ಕಮಲವ ಕೀರ್ತಿಸುವನೇ ಕುಲಜ || ೩ ||
*********