..
ಕೂಸನು ಕಂಡೀರ್ಯಾ ಸುಪ್ರ-ಹ್ಲಾದನ ಕಂಡೀರ್ಯಾ ನಮ್ಮಕೂಸನು ಕಂಡೀರ್ಯಾ ಪ
ರಾಕ್ಷಸ ಕುಲದಲಿ ಜನಿಸಿತು ಕೂಸುರಾಧಾಕೃಷ್ಣನ ಭಜಿಸಿತು ಕೂಸುರಾಗ ದ್ವೇಷಗಳ ಬಿಟ್ಟಿತು ಕೂಸುರಾಮ ಪಾದವ ನೆನೆಯುವ ಕೂಸು 1
ಘನ ಹರಿ ಕಂಬದಿ ತೋರಿತು ಕೂಸುಗಳಿಸಿತು ಕೃಷ್ಣನ ಪ್ರೇಮವ ಕೂಸುಘನ ಪಂಪಾಲಯದಿ ವಾಸಿಪ ಕೂಸುಗಣೆ ಗೋಪಾಲನ ಪ್ರೀತಿಯ ಕೂಸು2
ಪ್ರಸಿದ್ಧ ವ್ಯಾಸರಾಯರೆಂಬ ಕೂಸುಪ್ರವೀಣ ವಿದ್ಯೆಯೊಳೆನಿಸಿದ ಕೂಸುಪ್ರಹ್ಲಾದನೆಂಬುವ ಆಹ್ಲಾದ ಕೂಸುಪ್ರಸನ್ನ ಕಾಗಿನೆಲೆಯಾದಿಕೇಶವನ ಕೂಸು3
***