Showing posts with label ಕೆಂಡಕ್ಕೆ ಗೊರಲಿ ಮುತ್ತುವುದುಂಟೆ purandara vittala. Show all posts
Showing posts with label ಕೆಂಡಕ್ಕೆ ಗೊರಲಿ ಮುತ್ತುವುದುಂಟೆ purandara vittala. Show all posts

Wednesday, 4 December 2019

ಕೆಂಡಕ್ಕೆ ಗೊರಲಿ ಮುತ್ತುವುದುಂಟೆ purandara vittala

ಪುರಂದರದಾಸರು
ಕೆಂಡಕ್ಕೆ ಗೊರಲಿ ಮುತ್ತುವುದುಂಟೆ ಪಾಂಡುರಂಗನ ದಾಸರಿಗೆ ಭಯವುಂಟೆ ? ಪ.

ಆನೆ ಸಿಂಹನ ಕೂಡ ಅಣಕವಾಡುವುದುಂಟೆಶ್ವಾನಗೆ ಹುಲಿಯೊಳು ಸರಸವುಂಟೆ ?||ಏನೆಂಬೆ ಎರಡಿಲ್ಲದಿರುಳು ಹಗಲು ನಿನ್ನಧ್ಯಾನ ಮಾಡುವರಿಗೆ ನರಕವುಂಟೆ ? ಸ್ವಾಮಿ ? 1

ಕತ್ತಲೆ ರವಿಯನು ಕವಿದು ಮುಚ್ಚುವುದುಂಟೆಹತ್ತಿ ಸರ್ಪನ ಕಪ್ಪೆ ನುಂಗುವುದುಂಟೆ ? ||ಅತ್ತಿತ್ತ ಮನವನು ಹರಿಬಿಡದಲಿ ಏಕಚಿತ್ತದಿ ನೆನೆವಗೆ ನರಕವುಂಟೆ ಸ್ವಾಮಿ 2

ಆ ಮಾರುತನ ಗುದ್ದಿ ಹದ್ದು ನೋಯಿಸಲುಂಟೆಹೇಮಗಿರಿಗೆವಜ್ರ ಸಿಡಿಯಲುಂಟೆ ?ಸ್ವಾಮಿ ಶ್ರೀ ಪುರಂದರವಿಠಲರಾಯನೆ ನಿನ್ನನಾಮಧಾರಿಗಳಿಗೆ ನರಕವುಂಟೆ ಸ್ವಾಮಿ ? 3
*******