Showing posts with label ಕೆಟ್ಟೆ ಕೆಟ್ಟೆ ಕೆಟ್ಟೆ ಕೃಷ್ಣ ದೃಷ್ಟಿಕೊಟ್ಟು ಕೈಯ ಪಿಡಿಯೋ krishnavittala. Show all posts
Showing posts with label ಕೆಟ್ಟೆ ಕೆಟ್ಟೆ ಕೆಟ್ಟೆ ಕೃಷ್ಣ ದೃಷ್ಟಿಕೊಟ್ಟು ಕೈಯ ಪಿಡಿಯೋ krishnavittala. Show all posts

Monday, 2 August 2021

ಕೆಟ್ಟೆ ಕೆಟ್ಟೆ ಕೆಟ್ಟೆ ಕೃಷ್ಣ ದೃಷ್ಟಿಕೊಟ್ಟು ಕೈಯ ಪಿಡಿಯೋ ankita krishnavittala

ಕೆಟ್ಟೆ ಕೆಟ್ಟೆ ಕೆಟ್ಟೆ ಕೃಷ್ಣ ದೃಷ್ಟಿಕೊಟ್ಟು ಕೈಯ ಪಿಡಿಯೋ ಪ


ಇಷ್ಟ ಮೂರ್ತಿ ಬಿಟ್ಟರೆನ್ನ ಕಷ್ಟಬಿಡಿಸೆಯಾರ ಬೇಡಲೋ ಅ.ಪ


ಕಟ್ಟಿತಾಳಿ ತೊರೆಯೆ ಗಂಡ ಕಷ್ಟವಲ್ಲೆ ಸತಿಗೆ ಪೇಳು

ಶಿಷ್ಠ ದೊರೆಯೆ ದಾಸನೆಂಬಿ ಶ್ರೇಷ್ಠತಾಳಿ ಕಂಠದಲ್ಲಿದೆ

ಬಿಟ್ಟಿ ಏನೋ ಬಿರದು ಎಲ್ಲ ಕಟ್ಟಿಕೊಂಡು ಮೆರೆಯುತಿಹುದು

ಕೆಟ್ಟದೂರು ತಟ್ಟದಿರದು ಭ್ರಷ್ಠನೆನಿಸಬೇಡೊ ಎನ್ನ 1


ಎಡವಿ ಬೀಳೆ ಮಗುವು ತಾಯಿ ಕಡಿವಳೇನು ಪೊಡವಿಗೊಡೆಯ

ಅಡಿಯ ಪಿಡಿದ ದಾಸನಾನು ಬಡವನಾದರೇನೂ ನುಡಿಯೋ

ಬಿಡದು ನನ್ನ ಭಾರ ನಿನಗೆ ತಡವು ಯಾಕೋ ಬರಿದೆ ಬಿಂಕ

ಸಡಲಿ ಸುತ್ತ ಮಾಯಪಾಶ ದೃಢವ ಮಾಡು ಭಕ್ತಿ ವಿರಕ್ತಿ 2


ದೋಷಿಯಾದರೇನು ನಾನು ದೋಷದೂರನಲ್ಲೆ ನೀನು

ನಾಶಮಾಡು ಬೀಸಿದೃಷ್ಠಿ ಮೀಸಲಲ್ಲೆ ನಿನಗೆ ಸ್ವಾಮಿ

ಈಶ ಕರುಣಕುಂಟೆ ಮೇರೆ ಓಸು ಜಗದ ಭಾಸವೆಲ್ಲ

ಶ್ರೀಶ ನೀನು ಕೊಟ್ಟರುಂಟು ದಾಸಪೋಷ ಶ್ವಾಸನಾಣೆ 3


ಗಂಟು ಕಳ್ಳ ನೀನೆ ಸತ್ಯ ಭಂಟನೆನ್ನ ಸ್ವತ್ತು ನೀನೆ

ನೆಂಟ ಬೇರೆ ಇಲ್ಲದಿರಲು ಅಂಟಿಸಿರುವೆ ವಿಷಯ ಕಂಟಕ

ತಂಟಿ ಬಿಟ್ಟು ಈಗಲೇನೆ ಅಂಟಿಕೊಳ್ಳೊ ಮನದಿ ಗಟ್ಟಿ

ಕುಂಟು ಕಲೆಯ ಸುಟ್ಟುಬಿಟ್ಟು ಉಂಟು ಮಾಡು ಎಲ್ಲ ನನಗೆ 4


ಬೆಟ್ಟದೊಡೆಯ ಶ್ರೀನಿವಾಸ ಎಷ್ಟರವನೊ ನಾನು ಭೃತ್ಯ

ಗಟ್ಟಿಮಾತು ನುಡಿದೆನೆಂದು ಸಿಟ್ಟುಬೇಡ ಪಾದ ಪಿಡಿದಿಹೆ

ಸುಟ್ಟು ಸುಟ್ಟು ಭವದಿ ಬೆಂದು ಇಷ್ಟು

ನುಡಿದೆ ಜಯಮುನೀಂದ್ರ

ಶ್ರೇಷ್ಟಹೃಸ್ಥಮಧ್ವ ಶ್ರೀ ಪ್ರೇಷ್ಟದೈವ ಕೃಷ್ಣವಿಠಲ5

***