Showing posts with label ಕೆಳದಿ ಕೇಳುವ ಬಾರೆ ನಳಿನಾಕ್ಷ ವನದಲ್ಲಿ vasudeva vittala. Show all posts
Showing posts with label ಕೆಳದಿ ಕೇಳುವ ಬಾರೆ ನಳಿನಾಕ್ಷ ವನದಲ್ಲಿ vasudeva vittala. Show all posts

Wednesday 1 September 2021

ಕೆಳದಿ ಕೇಳುವ ಬಾರೆ ನಳಿನಾಕ್ಷ ವನದಲ್ಲಿ ankita vasudeva vittala

 ..


kruti by ವ್ಯಾಸತತ್ವಜ್ಞ ತೀರ್ಥರು vyasatatwajna teertharu 


ಕೆಳದಿ ಕೇಳುವ ಬಾರೆ ನಳಿನಾಕ್ಷ ವನದಲ್ಲಿ

ಕೊಳಲನೂದುವ ಬಗೆಯ

ನಳಿನಜಾಂಡವು ತಾನೆ ತಲೆದೂಗುತಲಿದೆ

ಕುಳಿತಿರೆ ವಶವಲ್ಲವೆ ಪ


ಸರಸಿಜ ನಯನಾಳೆ ಧರೆಯ ಭಾಗ್ಯವ ನೋಡೆ

ತರುಗುಲ್ಮಾಲತೆ ನೆವದಿ ಭರದಿ ಪುಲಕಿತಳಾಗೆ

ಪರಿಪರಿ ಸುಮದಿಂದ ನೆರೆ ನಸುನಗುತಿಪ್ಪ

ಮರುಳೆ ಕಣ್ಣಿಲಿ ನೋಡೆ ವರ ವಿಮಾನಗಳು ಸಂ-

ಚರಿಸಿ ಮೆರೆವ ವೈಭವ ಧರೆಯೆಲ್ಲಾ ತಿಳಿಯದು

ಸುರನಿಕರಾಲಯ ಪರನಲ್ಲಿ ಎವೆ ಇಡುತ-

ಲೋಲ್ಯಾಡದೆ ಬಿಡರು 1


ವಾಮಾಲೋಚನೆ ಸುರರ ಧಾಮಾವೆಂಬಿಯಾ ಇದು

ಕಾಮತನಯ ಕಾಮದೇವ ಸೋಮಶೇಖರ ತಾನು

ತಾಮರಸಾಸನ ಪ್ರೇಮಾದಿ ನಲಿಯುವ

ಆ ಮಹರಾದಿ ಲೋಕವೆ ಸಾಮಜಗಮನೆ ಕೇಳೆ

ನೀ ಮರುಳಾಗ ಬ್ಯಾಡಾ ಆ ಮುಕುತಿ ಸ್ಥಾನವೆ

ಶ್ರೀ ಮುಖ ವನಿತೆಯರು ಈ ಮುಕುಂದನ

ಸೇವೆ ಮಾಡುವರು 2


ದೂರ ಜನರಿಗೆ ಸಾಲೋಕ್ಯ ಊರಲಿಪ್ಪರಿಗೆ ಸಾಮೀಪ್ಯ

ಗೋರಕ್ಷಕರಿಗೆ ಸಾರೂಪ್ಯ ಸೇರಿದ ಯುವತಿಗೆ

ಭರದಿ ಸಾಯುಜ್ಯವೆ ಮೀರಿದೆ ಮುಕುತಿಗಿದು

ಭಾರಿ ಭಾರಿಗೆ ಸಾಮಾ ಪೂರೈಸಿ ಮುಕುತರು

ತೋರುವರಿಲ್ಲಿ ಆನಂದ

ಈ ರಭಸದಿ ವೇಣು ಪೂರೈಸಿ ಸುಖವೀವ

ಧೀರ ವಾಸುದೇವವಿಠಲ 3

***