Showing posts with label ಗಂಗೆ ನಿನಗೋಸ್ಕರ ನಾನು ನಮೋ ಎಂಬೆ ramesha GANGE NINAGOSKARA NAANU NAMO EMBE. Show all posts
Showing posts with label ಗಂಗೆ ನಿನಗೋಸ್ಕರ ನಾನು ನಮೋ ಎಂಬೆ ramesha GANGE NINAGOSKARA NAANU NAMO EMBE. Show all posts

Thursday, 2 December 2021

ಗಂಗೆ ನಿನಗೋಸ್ಕರ ನಾನು ನಮೋ ಎಂಬೆ ankita ramesha GANGE NINAGOSKARA NAANU NAMO EMBE

 


ಗಂಗೆ ನಿನಗೋಸ್ಕರ ನಾನು ನಮೋ ಎಂಬೆ

ತುಂಗೆ ಎನ್ನ ಪಂಥವ ಕೇಳಿ ಗೆಲಿಸೆಂಬೆ ಪ.


ಅಚ್ಯುತನ ನಖತಾಕಿ ಬಿಚ್ಚಿ ಬ್ರಹ್ಮಾಂಡವುಸ್ವಚ್ಚಜಲವಾಗಸುರಿದಾವುಸ್ವಚ್ಚ ಜಲವಾಗ ಸುರಿದಾವುಅಜನೋಡಿ ಉತ್ಸಾಹದಿ ನುತಿಸಿದ1

ತಂದೆಯ ನಖದಿಂದ ಬಂದ ಜಲಕಂಡು ಮಂದಜಾಸನು ಸ್ತುತಿಸಿದಮಂದಜಾಸನು ಸ್ತುತಿಸಿದ ಸರಸ್ವತಿಬಂದು ಆರುತಿಯ ಬೆಳಗೋಳು 2

ಕಂಡ ಜಲವ ಕಮಂಡಲದಿ ತುಂಬಿ ಭೂಮಂಡಲ ಪತಿಯ ಚರಣವಭೂಮಂಡಲ ಪತಿಯ ಚರಣವ ತೊಳೆಯಲುಕೊಂಡಾಡಿ ಹರನು ಧರಿಸಿದ 3

ಸುರನಾರಿಯರೆಲ್ಲಾ ಪರಿಪರಿಸ್ತುತಿಸಲುಹರಿಪಾದದ ರೇಣು ಹರಿದಿಲ್ಲಿಹರಿಪಾದದ ರೇಣು ಹರಿದಿಲ್ಲಿ ಬಂತೆಂದುಸುರರು ಸಂತೋಷಪಡುತಲಿ4

ವಿಷ್ಣುಪದಿಯೆಂದು ಇಟ್ಟರು ನಾಮವಧಿಟ್ಟ ರಾಮೇಶನ ಮಗಳಿಗೆ ಧಿಟ್ಟ ರಾಮೇಶನ ಮಗಳಿಗೆ ಧೃವರಾಯಎಷ್ಟು ಭಕ್ತಿಂದ ಸ್ತುತಿಸಿದ 5

***