..
kruti by ಬೇಲೂರು ವೈಕುಂಠ ದಾಸರು belur vaikunta dasaru
ಗಾಡಿಯೆತ್ತಲಿಂದ ಬಂದುದೆ ಮಾತ
ನಾಡಲರಿಯದಿಪ್ಪ ಹೊಚ್ಚ ಹೊಸ ಹರೆಯದ ಮುಗುದೆಗೀ ಪ
ಬಳುಕೆ ಸಿಂಹಮಧ್ಯ ಬಟ್ಟಮೊಲೆಗಳು ಮರೆ ತೋರವಾದ
ಬಳವಿ ಮುಡಿಯೊಳಲರು ಹೊಯ್ಯನಿಳೆಯಲುದುರಲು
ಜಲಜಮುಖದಿ ಬೆಮರುದೋರೆ ವಲಯಹಾರ ಉರದಿ
ಘಲಿರು ಘಲಿರೆನೆ ಆವಕಡೆಯು ಕುಲುಕಿ ಕುಲುಕಿ ನಡೆವ ಈ 1
ಮಿಸುಪ ಮಂದಹಾಸ ಮುಖದಿ ಮಸಗಿದಂತ ಕಾಂತಲಜ್ಜೆ
ಮುಸುಕೆ ಮಿಸುಪ ಕದಪಿನಲ್ಲಿ ಎಸೆವ ಓಲೆ ಢಾಳಿಸಿ
ಸಸಿನೆ ತಿದ್ದಿ ಉರದಿ ಜರಿಯ ವಸನವನ್ನು ಸಂತವಿಸುತ
ಕುಸುರಿಲಂಗ ದಂದವನ್ನು ಎಸಸಿ ಬಿಡುವ ನಡೆವ 2
ಕರವನೊಯ್ಯಗೊಲಿದು ಉರಗಗಿರಿಯ ಮೇಲೆ ಬಾಲಚಂದ್ರ
ನಿರಲು ಸೆರಗ ಮರೆಯಮಾಡಿ ಮರಳಿ ಮರಳಿ ನೋಡುತಾ
ಸ್ಮರನತಾತ ಸುರನಗರದೆರೆಯ ವೈಕುಂಠಲಕ್ಷ್ಮಿಯರಸನೊಡನೆ
ನೆರೆದ ಪರಿಯ ಸಿರಿಯ ಗರುವ ಗಮನದಾ 3
***