Showing posts with label ಗುರುಪರಮ ಸ್ವರೂಪ ಇಡದು ತುಂಬೇದ ನೋಡಿ ಎಡಬಲ ಪೂರ್ಣ mahipati. Show all posts
Showing posts with label ಗುರುಪರಮ ಸ್ವರೂಪ ಇಡದು ತುಂಬೇದ ನೋಡಿ ಎಡಬಲ ಪೂರ್ಣ mahipati. Show all posts

Wednesday, 1 September 2021

ಗುರುಪರಮ ಸ್ವರೂಪ ಇಡದು ತುಂಬೇದ ನೋಡಿ ಎಡಬಲ ಪೂರ್ಣ ankita mahipati

ಕಾಖಂಡಕಿ ಶ್ರೀ ಮಹಿಪತಿರಾಯರು

ಗುರುಪರಮ ಸ್ವರೂಪ ಪ 


ಇಡದು ತುಂಬೇದ ನೋಡಿ ಎಡಬಲ ಪೂರ್ಣ ಬಿಡದೆ ಸೂಸುತಲ್ಯದೆ ಜಡಿದು ನಿಧಾನ 1 

ಸಂಧಿಸಿಹದು ನೋಡಿ ಹಿಂದೆಮುಂದೆಲ್ಲ ಒಂದು ಮನದಿ ನೋಡಿ ಬಂದು ನೀವೆಲ್ಲ 2 

ಬೆಳದುಕೊಂಬುವಂತೆ ಹೊಳೆಯುತವಲ್ಲ ಸುಳುಹು ಶ್ರೀ ಕೃಷ್ಣನ ತಿಳುವವರಿಲ್ಲ 3 

ಕಣ್ಣುಗೆಟ್ಟಿರಬ್ಯಾಡಿ ಕಾಣದೆ ಖೂನ ತ ನ್ನೊಳಗದೆ ನೋಡಿ ಸಾನ್ನಿಧ್ಯಪೂರ್ಣ 4 

ಭಾಸುತಲ್ಯದೆ ಭಾಸ್ಕರಕೋಟಿ ತೇಜ ದಾಸ ಮಹಿಪತಿ ಪ್ರಾಣದೊಡಿಯ ಸಹಜ 5

****