Showing posts with label ಗುರುರತ್ನ ಪರಮ ಪ್ರಿಯ ಕರುಣಾನಿಧೆ ನಿಮ್ಮ ಗುರುರತ್ನ gopalakrishna vittala. Show all posts
Showing posts with label ಗುರುರತ್ನ ಪರಮ ಪ್ರಿಯ ಕರುಣಾನಿಧೆ ನಿಮ್ಮ ಗುರುರತ್ನ gopalakrishna vittala. Show all posts

Sunday, 1 August 2021

ಗುರುರತ್ನ ಪರಮ ಪ್ರಿಯ ಕರುಣಾನಿಧೆ ನಿಮ್ಮ ಗುರುರತ್ನ ankita gopalakrishna vittala

ಗುರುರತ್ನ ಪರಮ ಪ್ರಿಯ ಕರುಣಾನಿಧೆ ನಿಮ್ಮ

ಗುರುರತ್ನ ಪರಮ ಪ್ರಿಯ ಕರುಣಾನಿಧೆ ನಿಮ್ಮ

 ಪೊರೆಯಬೇಕೆನ್ನ ದೊರೆಯೆ ಪ.


ವರ ತಂದೆ ಮುದ್ದುಮೋಹನ ದಾಸಾರ್ಯರೆ

ಪರಿಪರಿಯಿಂದ ಭಕ್ತರನು ಪೊರೆಯುವರೆ

ಪರಮಾರ್ಥ ಚಂದ್ರೋದಯದ ಪ್ರಕಾಶಕರೆ

ಪರಿಮಳ ಸುನಾಮದಲಿ ಸರ್ವತ್ರವ್ಯಾಪಕರೆ 1

ತರತರದ ಸುಗುಣ ಮಣಿಮಾಲೆಯಿಂ ಶೋಭಿಪರೆ

ವರಶಿಷ್ಯ ರತ್ನಪದಕಗಳಿಂದಲೊಪ್ಪಿಹರೆ

ಸುರರಗಣ ಮಧ್ಯದಲಿ ಪರಿಶೋಭಿಸುತಲಿಹರೆ

ಮೊರೆಹೊಕ್ಕವರ ಕಾಯ್ವ ಪರಮ ಕರುಣಾಕರರೆ 2

ಕನಸಿನಲಿ ಮನಸಿನಲಿ ಕಳವಳವ ಹರಿಸುವರೆ

ಮನಸಿಜಪಿತನನ್ನು ಮನದಿ ನೆನೆಯುವರೆ

ಇನಕೋಟಿತೇಜ ಶ್ರೀ ಶ್ರೀನಿವಾಸನ ಕೃಪೆಗೆ

ಅನುಮಾನವಿಲ್ಲದೆಲೆ ಅರ್ಹತೆಯ ಕೊಡಿಸುವರೆ 3

ಭಕ್ತರನು ಪೊರೆಯುವ ಕಾರುಣ್ಯನಿಧಿ ಎಂದು

ಭಕ್ತಿಯಿಂದಲಿ ನಿಮ್ಮ ಪಾದ ನಂಬಿರುವೆ

ಭಕ್ತವತ್ಸಲ ಶೇಷಶಯನನಾ ಸೇವೆಯನು

ನಿತ್ಯ ಮಾಳ್ಪಂಥ ಸೌಭಾಗ್ಯ ನೀಡುವುದು 4

ಕವಿದಿರುವ ಅe್ಞÁನಪರೆಯನ್ನು ಛೇದಿಸುತ

ಸವಿಯಾದ ಹರಿಯ ನಾಮಾಮೃತ ಉಣಿಸಿ

ಪವನನಂತರ್ಯಮಿ ಗೋಪಾಲಕೃಷ್ಣವಿಠ್ಠಲ

ತವಕದಿಂದಲಿ ಪೊಳೆವ ಸುe್ಞÁನ ನೀಡುವುದು 5

****