Showing posts with label ಗುರುರಾಜನೇ ಎನ್ನ ಪರಿಪಾಲಿಪುದ ಬಿಟ್ಟು hanumesha vittala GURURAJANE ENNA PARIPALIPUDA BITTU. Show all posts
Showing posts with label ಗುರುರಾಜನೇ ಎನ್ನ ಪರಿಪಾಲಿಪುದ ಬಿಟ್ಟು hanumesha vittala GURURAJANE ENNA PARIPALIPUDA BITTU. Show all posts

Thursday, 2 December 2021

ಗುರುರಾಜನೇ ಎನ್ನ ಪರಿಪಾಲಿಪುದ ಬಿಟ್ಟು ankita hanumesha vittala GURURAJANE ENNA PARIPALIPUDA BITTU

ಗುರುರಾಜನೇ ಎನ್ನ ಪರಿಪಾಲಿಪುದ ಬಿಟ್ಟು

ವರ ಮಂತ್ರಾಲಯದೊಳಿರುವುದುಚಿತವೇನೋ ಪ

ಬಡ ಭಕ್ತನನು ಕಷ್ಟ ಕಡಲೊಳಿರಿಸಿ ತುಂಗಾ

ದಡದಿನಿಂತೆನ್ನ ಕೈ ಬಿಡುವುದುಚಿತವೇನೋ 1

ಅಡಿ ಸೇವಕನೊಳಿಂಥಾ ಕಡು ಕೋಪವ್ಯಾತಕೋ

ನುಡಿ ನುಡಿಗೆನ್ನ ತಪ್ಪು ಹಿಡಿದು ಪೋಗುವರೇನೊ 2

ಒಡೆಯ ಶ್ರೀ ಹನುಮೇಶವಿಠಲನ ದಾಸನೇ

ಬಡವನಿರುವೆನೆಂದು ನೋಡದಿರುವರೇನೊ 3

****