Showing posts with label ಗೋತ್ರ ಪ್ರವರ ಉಚ್ಚಾರಣೆ ವಂದೇ ಕಾಣೊ vijaya vittala. Show all posts
Showing posts with label ಗೋತ್ರ ಪ್ರವರ ಉಚ್ಚಾರಣೆ ವಂದೇ ಕಾಣೊ vijaya vittala. Show all posts

Wednesday, 16 October 2019

ಗೋತ್ರ ಪ್ರವರ ಉಚ್ಚಾರಣೆ ವಂದೇ ಕಾಣೊ ankita vijaya vittala

ಗೋತ್ರ ಪ್ರವರ ಉಚ್ಚಾರಣೆ ವಂದೇ ಕಾಣೊ
ಧಾತ್ರಿಯೊಳಗೆ ತಂದೆ ಮಕ್ಕಳು ಮಾಡುವ ಕಾ |
ಲತ್ರಯದ ಸಂಧ್ಯಾವೆಲ್ಲ ಎಂದಿಗೂ ಭೇದವಿಲ್ಲಾ ಪ

ಮಾತ್ರ ನುಡಿಸುವ ಬುದ್ಧಿ ಪೇಳಿ |
ಚಿತ್ರವ ಗೋಡೆಯ ಮೇಲೆ ರಚಿಸಿರಲು ನೋಡಿ
ಸ್ತೋತ್ರ ಮಾಡಿದರೆ ಯೇನಾಹದೋ1

ಚಿತ್ರಿಕ ಬಲು ವಿವೇಕ ಉಳ್ಳವನೆಂದು
ಪಾತ್ರರ ಮುಂದೆ ಕೊಂಡಾಡಿದಂತೆ |
ಧಾತ್ರಿಯೊಳಗೆ ನಮ್ಮ ಪುರಂದರದಾಸರ
ಸ್ತೋತ್ರ ಮಾಡಿರಯ್ಯ ಸಚಲರಾಗೀ 2

ಗಾತ್ರ ನಿರ್ಮಲವಕ್ಕು ಯೆಂದೆಂದಿಗೆ ದಿವ್ಯ |
ನೇತ್ರದಿಂದಲಿ ಹರಿಯ ಸರಿದರುಶನಾ |
ರಾತ್ರಿಂಚರೆಯೆಂದು ಪೆಸರುಳ್ಳವು ಕುಮುದ
ಮಿತ್ರಗೆ ಸರಿಯೇನು ಉಳದಾದವು 3

ಸ್ತೋತ್ರಾಭರಣವಾದ ದಾಸರ ಶವನಕ್ಕೆ ಅ
ನ್ಯತ್ರ ನುಡಿವದು ಧಿಕ್ಕರಿಪದು |
ನಿತ್ರಾಣವಾದ ಮನುಜ ಹಿರಿಯರ
ವಿತ್ತದಿಂದ ಯಾತ್ರಿ ಮಾಡಿ ಪುಣ್ಯ ಘಳಿಸಿದಂತೆ 4

ಸ್ತೋತ್ರ ಮಿಟಮ್ಯಾಲೆ ಪಂಗ್ತಿ ಹಾಕಿ ಕೊಡಲು
ಮಾತ್ರೆಗಳ ನೋಡಿ ಬರದಂತೆ ವೋ |
ಶತ್ರು ಸಂಹಾರ ನಮ್ಮ ವಿಜಯವಿಠ್ಠಲನಂಘ್ರಿ ಶತ
ಪತ್ರ ಬಲ್ಲವರಿಗೆ ಯಿದೆ ವಿಸ್ತಾರ ನಿರ್ಮಾಣ 5
**********