Showing posts with label ಛೀ ನಿನ್ನ ಮೋರೆ ಮೇಲೆ ಠೊಣ್ಯಛೀ ನಿನ್ನ ಮೋರೆ ಮೇಲೆ neleyadikeshava. Show all posts
Showing posts with label ಛೀ ನಿನ್ನ ಮೋರೆ ಮೇಲೆ ಠೊಣ್ಯಛೀ ನಿನ್ನ ಮೋರೆ ಮೇಲೆ neleyadikeshava. Show all posts

Wednesday, 1 September 2021

ಛೀ ನಿನ್ನ ಮೋರೆ ಮೇಲೆ ಠೊಣ್ಯಛೀ ನಿನ್ನ ಮೋರೆ ಮೇಲೆ ankita neleyadikeshava

 ..

ಛೀ ನಿನ್ನ ಮೋರೆ ಮೇಲೆ - ಠೊಣ್ಯಛೀ ನಿನ್ನ ಮೋರೆ ಮೇಲೆ ಪ


ಹೊತ್ತರೆದ್ದು ಮುಖ ತೊಳೆದು ಮನೆಮನೆ ಪೋಕರಿ ಅಲೆಯುತಿದ್ದೆವಿತ್ತ ಮದದಿ ಪರಸ್ತ್ರೀಯರ ಕಂಡು ಅರ್ತಿಬಡುತಲಿದ್ದೆಲೆತ್ತ ಪಗಡೆ ಚದುರಂಗ ಆಟದಲ್ಲೆ ಹೊತ್ತು ಕಳೆಯುತಿದ್ದೆನಿತ್ಯ ನಿತ್ಯ ಈ ಪರಿ ಆಯುಷ್ಯವ ವ್ಯರ್ಥ ಕಳೆಯುತಿದ್ದೆ ಠೊಣ್ಯ 1


ಕಂಡ ಕಂಡಲ್ಲಿಗೆ ಪೋಗಿ ಧನಂಗಳ ಕೊಂಡು ಬರುತ್ತಲಿದ್ದೆಹೆಂಡಿರು ಮಕ್ಕಳು ಹಿತದವರೆಂದು ಕೊಂಡಾಡುತಲಿದ್ದೆಖೋಡಿ ಮಾತುಗಳನು ಹೇಳಿ ಮಂದಿಯ ಕುಂಡೆ ಚಿವುಟುತಿದ್ದೆಭಂಡ ಬಾಳು ಇದು ರಂಡೆ ಗಂಡ ಕಂಡ್ಯ ಯಮನ ಬಾಧೆ ಠೊಣ್ಯ2


ಮಾನವ ಜನ್ಮಕೆ ಬಂದು ಪುಣ್ಯ ಮತ್ತೇನೂ ಮಾಡದೆ ಹೋದೆದಾನವಾಂತ ಸತ್ಪಾತ್ರರಿಗೆ ನೀ ದೀನತ್ವವ ಪಡೆದೆಜ್ಞಾನಶೂನ್ಯ ಮದವೇರಿದ ಸೊಕ್ಕಿದ ಕೋಣಕೆ ಹುಟ್ಟಿದ್ದೆದೀನರಕ್ಷಕಾದಿಕೇಶವ ವಿಠಲಂಗೆ ನೀನತಿ ದೂರಾದೆ ಠೊಣ್ಯ 3

***