..
ಜಗದಂತರ್ಯಾಮಿಯೆಂದೆನುತ ನಿನ್ನನಿಗಮ ಸಾರುವ ಮಾತು ಪುಸಿಯೆ ರಂಗ ಪ
ಭೇದವಿಲ್ಲದೆ ಸಕಲ ಜೀವರನು ಪೊತ್ತಿಹಳುಭೂದೇವಿಯೆಂಬಾಕೆ ನಿನ್ನ ಅರ್ಧಾಂಗಿಯುಸಾಧನವು ಸಕಲ ಸಿರಿ ಸಂಪತ್ತುಗಳನೀವಶ್ರೀದೇವಿ ನಿನ್ನ ಹಿರಿಯರಸಿಯೋ ದೇವ 1
ಎಂಬತ್ತುನಾಲ್ಕು ಲಕ್ಷ ಜೀವರಾಶಿಗಳನ್ನುಬೊಂಬೆಗಳ ಮಾಡಿ ಭವರಂಗದಲಿತುಂಬಿ ಕಲೆಗಳನೊತ್ತಿ ನೊಸಲ ಬರೆಹವ ಬರೆವಅಂಬುಜೋದ್ಭವ ನಿನ್ನ ಹೆಮ್ಮಗನು ದೇವ 2
ಸಕಲ ಜೀವರಾಶಿಗಳನು ಕಲ್ಪಿಸುವ ಬೀಜಸುಖದಿಂದ ಮಾಯಾಂಗನೆಯರೊಡಲೊಳುಅಕ್ಕರದಿ ಪಿಂಡಾಂಡಗಳ ಕಟ್ಟಿ ಬಲಿಸುವಮಕರಾಂಕ ನಿನ್ನ ಕಿರಿಮಗ ದೇವ 3
ರಾಮನಾಮವ ಜಪಿಸಿ ಪರಮ ವೈಷ್ಣವನಾಗಿಹೇಮಗಿರಿ ಸನಿಹ ಸಾಹಸ್ರನಾಮಪ್ರೇಮದಲಿ ಜಪಿಸುತ್ತ ವೈರಾಗ್ಯನಿಧಿಯಾದಸೋಮಶೇಖರನು ನಿನ್ನ ಮೊಮ್ಮಗನು 4
ಜಂಗಮ ಸ್ಥಾವರಕಾಧಾರವಾಗಿಹಳುಭಂಗಪಡುವ ಜನರ ಕರ್ಮವ ಕಳೆವಳುಹಿಂಗದೆ ಜಗವ ಪಾವನವ ಮಾಡುವ ಪುಣ್ಯಗಂಗೆಯೆಂಬಾಕೆ ನಿಮ್ಮಯ ಮಗಳು ದೇವ 5
ಶುದ್ಧ ಬುದ್ಧಿಯನುಳ್ಳ ಪ್ರದ್ಯುಮ್ನನಾ ಮಗಳುಶ್ರದ್ಧೆಯೆನಿಸಿಕೊಂಡು ಸೂತ್ರಗೆ ಸತಿಯಾಗಿಸದ್ಯೋಜಾತನ ಪಡೆದು ಪ್ರಸಿದ್ಧವಹ ದೇವಿ ಈ ಧರೆಯೊಳು ಪುಟ್ಟಿ ನಿನ್ನ ದಾಸಿಯಾದಳು 6
ಇಂತು ಅಣುರೇಣು ತೃಣ ಕಾಷ್ಠದೊಳಗೆಲ್ಲಸಂತೋಷವಾಗಿಹುದು ನಿನ್ನ ಸ್ಮರಣೆಯಂತ್ರವಾಹಕನೆಂಬ ಬಿರುದು ಸಲುವುದು ನಿನಗೆಕಂತುಪಿತ ಕಾಗಿನೆಲೆಯಾದಿಕೇಶವನೆ 7
***