ಚನ್ನಪಟ್ಟಣದ ಅಹೋಬಲದಾಸರು
ಜನನ ಮರಣ ಎರಡು ಇಲ್ಲವೊ ತಾ ತಿಳಿದ ಮೇಲೆ ಪ
ಮನದೊಳಿರುವ ಮಮತೆ ಅಳಿದು ಘನವಿವೇಕವಾಗಿ ಕಾಣುವ ಇನಕುಲೇಶನನ್ನು ಬಿಡದೆಅನುರಾಗದೊಳು ಭಜಿಸಿದವಗೆ ಅ.ಪ ಆರುಮೂರು ಮೀರಿ ನೋಡೆಲೈ ಅಲ್ಲಿರುವ ತಾರಕದಾರಿ ಪ್ರಣವ ಸಾರುತಿದೆ ನೋಡೈ ಘೋರ ಕತ್ತಲೆಯನರಿದು ಮಾರಜನಕನನ್ನು ನೆನೆದು ಏರಿ ಶಿಖರದೊಳಗೆಯಿರುವ ತೇರು ಕಂಡುಬಂದಬಳಿಕ 1
ದಾನವಾರಿಯನ್ನು ಕಾಣೆಲೊ ಶ್ರೀಪರಮ ಚರಿತ ಗಾನಲೋಲನನ್ನು ಕಾಣೆಲೈ ಭಾನುಕೋಟಿರೂಪನಹುದು ಗುರುವು ತುಲಸಿರಾಮದಾಸ ದೀನರಕ್ಷಕನೆಂದು ಭಜನೆ ಮಾಡಿಕೊಂಡು ಬಂದಬಳಿಕ 2
***