ಜಯ ಜಯ ಕರುಣಾಕರ ಗುರುದೇವ ವಾಸುದೇವ ಪ
ಮುನಿಜನ ಪಾಲಕ ದೀನ ದಯಾಳ ಅನಾಥ ಬಂಧು ಶರಣಾಗತ ವತ್ಸಲ ಸನಕಾದಿಗಳೊಂದಿತ ಸಿರಿಸುಖಲೋಲ ಅನುದಿನ ಅಣುರೇಣುಕ ನೀನೆ ಸುಕಾಲ 1
ಪತಿತ ಪಾವನ ಪರಮ ಉದಾರ ಭಕ್ತವತ್ಸಲ ಮಾಮನೋಹರ ಅತಿಶಯಾನಂದ ಸುಜ್ಞಾನಸಾಗರ ಚತುರ್ದಶ ಭುವನಕೆ ನೀ ಸಹಕಾರ 2
ದೇಶಿಕರಿಗೆ ದೇವ ನೀನೇ ನಿಧಾನ ವಿಶ್ವಪಾಲಕ ಸ್ವಾಮಿ ನೀ ಸುಗುಣ ಭಾಸ್ಕರ ಕೋಟಿ ತೇಜ ನೀನೇ ಪೂರ್ಣ ಲೇಸಾಗ್ಹೊರಿಯೊ ದಾಸ ಮಹಿಪತಿ ಪ್ರಾಣ3
****