ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಜಯವೆನ್ನಿ ಕೈಯ ಮುಗುಬನ್ನಿ ದಯವುಳ್ಳ ಮಹಿಮಗಾರುತಿ ಮಾಡುವ ಬನ್ನಿ ಪ
ಮನವೆ ಬತ್ತಿ ತನುವಾರತಿ ಘನಕೆ ಮಾಡವ ಬನ್ನಿ ನೆನವು ತುಪ್ಪ ಜ್ಞಾನದೀಪವನ್ನು ಬೆಳಗುವ ಬನ್ನಿ 1
ಭಾವಗುಟ್ಟು ಠಾವಿಲಿಟ್ಟು ದೈವ ನೋಡು ಬನ್ನಿ ಮಾವಮಕರಗುಣ ಬಿಟ್ಟು ಸೇವೆಮಾಡು ಬನ್ನಿ 2
ಮಹಿಪತಿಸ್ವಾಮಿಗಿನ್ನು ಜಯಜಯವೆನ್ನಿ ಬಾಹ್ಯಾಂತ್ರ ಬೆಳಗಿ ಪೂರ್ಣ ಧನ್ಯವಾಗು ಬನ್ನಿ 3
***