ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಜಯಾನಂದ ಕಂದ ಜಯ ನಿರ್ಗುಣ ನಿದ್ರ್ವಂದ್ವ ಪ
ಒಳಗೆ ಹೊರಗೆ ನೀನೆ ಪೂರ್ಣ ಬೆಳಗಿ ಬೆಳಗಾಗಿಹುದ ಥಳಥಳಿಸುವ ಗುಣ ಹೊಳವು ಸುಳವು ಪಾವನ 1
ದೇವಾಧಿದೇವ ದೇವ ಭುವನತ್ರಯಕೆ ಜೀವ ಭಾವಿಕರಿಗೆ ಕಾವ ಭವನಾಶಗೈಸುವ 2
ಅಜ ಸುರವರ ಮುನೀಂದ್ರ ನಿಜಘನಸುಖಮುದ್ರ ರಾಜ ರಾಜರಾಜೇಂದ್ರ 3
ಮುನಿಜನರ ಪ್ರಾಣಪದಕ ಅನುಭವದ ನಿಜಸುಖ ಖೂನ ವಿಶ್ವತೋಮುಖ ಅಣುರೇಣು ವ್ಯಾಪಕ 4
ಮೂರು ಗುಣಕೆ ರಹಿತ ಗುರುಮೂರ್ತಿ ಸಾಕ್ಷಾತ ತರಳ ಮಹಿಪತಿದಾತ ಹೊರಿಯೊ ನೀ ಸದೋದಿತ 5
****