ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ದೇವ ಜಯ ದೇವ ಜಯ ಗುರು ಮೈಲಾರಿ ಮನಮೈಲ ಮರ್ದಿಸಿದಯ್ಯ ನೀನೆ ಅಸುರಾರಿ ಪ
ಖಡ್ಗವ ಕರದಲಿ ಪಿಡಿದು ಖಂಡಿಸಿದಙÁ್ಞನ ಖಂಡೇರಾಯೆನಿಸಿಕೊಂಡು ಪ್ರಕಟಿಸಿದನುದಿನ ಹಿಂಡದೈವಕೆ ಪ್ರಚಂಡನಹುದೊ ಪರಿಪೂರ್ಣ ಮಂಡಲದೊಳು ನಿಮ್ಮ ಕೊಂಡಾಡುದು ತಾ ಸುರಜನ 1
ಮಲಹರಣ ಮಾಡಲು ಧರಿಸಿ ಅವತಾರ ಮೂಲೋಕ ಪಾವನಮಾಡುವ ಸಹಕಾರ ಸಲಹುವೆ ಭಕ್ತಜನರಿಗೆ ನೀ ಘನ ಮಂದಾರ ಮಲೆತಿಹ ದೈತ್ಯರ ಸಂಹರಿಸುವೆ ನೀ ಅತಿಶೂರ 2
ಪತಿ ಅಹದು ಶ್ರೀಗುರು ಭೂಪತಿ ಬಾಹ್ಯಾಂತ್ರಿ ಬೆಳಗುವೆ ಶ್ರೀಪಾದಕೆ ಆರ್ತಿ ಇಹಪರಕೆ ದಾತನಹುದೊ ಶ್ರೀಪತಿ ಜಯಜಯವೆಂದು ಬೆಳಗುವೆ ದಾಸ ಮಹಿಪತಿ 3
***