ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ದೇವ ಜಯ ದೇವ ಜಯ ಜಗಜೀವನ ಕರ ರತ್ನ ಪ
ಅಜ ಸುರ ಮುನಿ ಪ್ರಾಣ ರಾಜೀವ ನಯನ ಸುಜನ ಸುಭೂಷಣ ತ್ರಿಜಗ ಪಾವನ 1
ಭಕ್ತ ಜನ ಉದ್ಧಾರ ಘನಗುರು ದಾತಾರ ಪತಿತಪಾವನಮೂರ್ತಿ ಮುನಿಜನ ಮಂದಾರ ಅತಿಶಯಾನಂದ ಅನುಪಮ ವ್ಯಾಪಕ ನಿರ್ಧಾರ ಸತತ ಸುಪಥ ಸದ್ಗುರು ಸಹಕಾರ 2
ಸಹ್ಯಾದ್ರಿ ಗಿರಿವಾಸ ಶ್ರೀಗುರು ಸರ್ವೇಶ ಬಾಹ್ಯಾಂತ್ರ ಪರಿಪೂರ್ಣ ಜಗದೀಶ ಮಹಿಪತಿಸ್ವಾಮಿ ಶ್ರೀ ದೇವದೇವೇಶ ದಾತ ಭಾಸ್ಕರಕೋಟಿ ಪ್ರಕಾಶ 3
***