Showing posts with label ಜಯ ಮಂಗಳಂ ಸತ್ಯಧೀರತೀರ್ಥರಿಗೆ hanumesha vittala satyadheera teertha stutih. Show all posts
Showing posts with label ಜಯ ಮಂಗಳಂ ಸತ್ಯಧೀರತೀರ್ಥರಿಗೆ hanumesha vittala satyadheera teertha stutih. Show all posts

Tuesday, 1 June 2021

ಜಯ ಮಂಗಳಂ ಸತ್ಯಧೀರತೀರ್ಥರಿಗೆ ankita hanumesha vittala satyadheera teertha stutih

 ಜಯ ಮಂಗಳಂ ಸತ್ಯಧೀರತೀರ್ಥರಿಗೆ

ಶುಭಮಂಗಳಂ ಯತೀ ಗುಣಮಣಿಗೆ ಪ


ಜಗದುದರಧರನಾದ ಜಗವ ಸೃಷ್ಟಿಸಿದಂಥ

ಜಗವ ಪಾಲಿಸುವ ಶ್ರೀ ಜಗದೀಶನಾ

ತ್ರಿಗುಣಮಾನಿಯಳಿಂದ ಬಗೆ ಬಗೆಯ ಸ್ತುತಿಗೋಳ್ವ

ರಘುವರನ ದಿವ್ಯ ಚರಣಗಳ ಸೇವಿಪಗೆ 1


ಜಗದೀಶನಾಜ್ಞೆಯಿಂ ಜಗಕೆ ಗುರುವೆನಿಸಿ ನಾ-

ಲ್ಮೊಗನೈಯ್ಯ ಸರ್ವಪರಿಹಾರನೆನಿಸಿದವಗೆ

ಜಗದೊಳಿರುವ ಅಜ್ಞ ಜನರುಗಳಿಗೆ ಪಂಚಮು-

ದ್ರೆಗಳನೇ ಇತ್ತು ಪಾಪಗಳ ತರಿದವಗೆ 2


ಸತ್ಯವೀರರು ಕರಗಳೆತ್ತಿ ಉತ್ತಮಪದವ

ಇತ್ತದ್ದೆ ಪುಸಿಯೆಂದು ನುಡಿದವರ ಮುಖಕೆ

ಮೃತ್ತಿಕೆಯನು ಹಚ್ಚಿ ಹತ್ತುಯಂಟೋ ರೂಪ ಸ-

ರ್ವೋತ್ತಮನ ಪೂಜಿಸಿದ ಸತ್ಯಧೀರರಿಗೆ 3


ಪುರಕಾಶಿಯಿಂದ ರಾಮೇಶ್ವರದ ಪರಿಯಂತ

ಇರುವ ಕ್ಷೇತ್ರಗಳಲ್ಲಿಯ ಮಹಿಮೆಯಾ

ದುರುಳ ಕಲಿಯಲಿ ಕಡಿಮೆಯಾಗಬಾರದು ಮನುಜ

ಸಿರಿರಾಮನಾಶ್ರಯದಿ ಜನಿಸಿ ಬಂದವಗೆ 4


ಕರುಣಾಸಾಗರನಿಗೆ ಕರೆದಲ್ಲಿ ಬರುವಗೆ

ಶರಣುಬಂದವರ ಪರಿಪಾಲಿಸುವಗೆ

ವರಗುರು ಮಧ್ವರಾಯರ ಪೀಠಪಾತ್ರಗೆ

ಧೀರ ಹನುಮೇಶವಿಠಲ 5

****