Showing posts with label ಜಾಣತನದ ಮಾತು ಏನು ಕೆಲಸವಯ್ಯ mahipati. Show all posts
Showing posts with label ಜಾಣತನದ ಮಾತು ಏನು ಕೆಲಸವಯ್ಯ mahipati. Show all posts

Thursday, 12 December 2019

ಜಾಣತನದ ಮಾತು ಏನು ಕೆಲಸವಯ್ಯ ankita mahipati

ಭೈರವಿ ರಾಗ ಕೇರವಾ ತಾಳ

ಜಾಣತನದ ಮಾತು ಏನು ಕೆಲಸವಯ್ಯ ಖೂನ ನೋಡಿ
ಪ್ರಾಣನಾಯಕನ ತಿಳಿಯುದೊಂದೆ ಜ್ಞಾನಾಭ್ಯಾಸ ಮಾಡಿ ||ಧ್ರುವ||

ಕರಿಮಣಿ ಒಂದಿಲ್ಲದೆ ಹೆಂಗಸಿಗೆ ಸರಮುತ್ತು ಯಾಕೆ
ಸಾರ ಸಂಜೀವನಿಲ್ಲದೆ ನೂರು ಗಿಡಮೂಲಿಕೆ ಯಾಕೆ
ನೆರೆ ಇಲ್ಲದೆ ಸಾಧುಸಜ್ಜನರ ಸರ್ವಬಳಗವ್ಯಾಕೆ
ಪರಮ ತತ್ವಜ್ಞಾನ ಒಂದಿಲ್ಲದೆ ಸುರಿಯುವ ಮಾತಿನ್ನ್ಯಾಕೆ ||೧||

ಪ್ರಾಣವಿಲ್ಲದ ಸುಂದರವಾದ ಶರೀರವ್ಯಾಕೆ
ಖೂನವಿಲ್ಲದೆ ತನ್ನ ನೂರುಕಾಲ ಬದುಕುವದ್ಯಾಕೆ
ಸ್ವಾನುಭವದ ಸುಖ ನೆಲೆಗೊಳ್ಳದೆ ಒಣ ಡಂಭವ್ಯಾಕೆ
ತಾನಾಗಿಹ ವಸ್ತು ದೊರಕಿಲ್ಲದೆ ನಾ ನೀನೆಂಬುವದ್ಯಾಕೆ ||೨||

ಶ್ರೀಹರಿ ಮಹಿಮೆಯ ಸೋಹ್ಯ ತಿಳಿಯದೆ ದೇಹವ್ಯಾಕೆ
ಗುಹ್ಯಗುರುತವಿಲ್ಲದೆ ಸಾಯಸಬಡುವದ್ಯಾಕೆ
ಸಾಹ್ಯಮಾಡುವ ಸದ್ವಸ್ತು ನೋಡದ ಕಣ್ಣು ನೋಟವ್ಯಾಕೆ
ಮಹಿಪತಿಸ್ವಾಮಿ ಸದ್ಗುರುಪಾದ ಕಾಣದ ಜನ್ಮವ್ಯಾಕೆ ||೩||
***

ಕಾಖಂಡಕಿ ಶ್ರೀ ಮಹಿಪತಿರಾಯರು

ಜಾಣತನದ ಮಾತು ಏನು ಕೆಲಸವಯ್ಯ ಖೂನ ನೋಡಿ ಪ್ರಾಣನಾಯಕನ ತಿಳಿವುದೊಂದೆ ಜ್ಞಾನಾಭ್ಯಾಸ ಮಾಡಿ ಪ  


ಕರಿಮಣಿ ಒಂದಿಲ್ಲದೆ ಹೆಂಗಸಿಗೆ ಸರಮುತ್ತು ಯಾಕೆ ಸಾರ ಸಂಜೀವನಿಲ್ಲದೆ ನೂರು ಗಿಡಮೂಲಿಕೆ ಯಾಕೆ ನೆರೆ ಇಲ್ಲದೆ ಸಾಧುಸಜ್ಜನರು ಸರ್ವಬಳಗವ್ಯಾಕೆ ಪರಮ ತತ್ವಜ್ಞಾನ ಒಂದಿಲ್ಲದೆ ಸುರಿಯುವ ಮಾತಿನ್ಯಾಕೆ 1 

ಪ್ರಾಣವಿಲ್ಲದ ಸುಂದರವಾದ ಶರೀರ್ಯಾಕೆ ಕಾಲ ಬದಕುವುವದ್ಯಾಕೆ ಸ್ವಾನುಭವದ ಸುಖ ನೆಲೆಯುಗೊಳ್ಳದೆ ಒಣ ಡಂಭವ್ಯಾಕೆ ತಾನಾಗಿಹ್ಯ ವಸ್ತು ದೊರಕಿಲ್ಲದೆ ನಾ ನೀನೆಂಬುದ್ಯಾಕೆ 2 

ಶ್ರೀ ಹರಿಮಹಿಮೆಯ ಸೋಹ್ಯ ತಿಳಿಯದೆ ದೇಹ್ಯವ್ಯಾಕೆ ಗುಹ್ಯಗುರುತವಿಲ್ಲದೆ ಸಾಯಸಬಡುವದ್ಯಾಕೆ ಸಾಹ್ಯಮಾಡುವ ಸದ್ವಸ್ತು ನೋಡದ ಕಣ್ಣು ನೋಟವ್ಯಾಕೆ ಮಹಿಪತಿಸ್ವಾಮಿ ಸದ್ಗುರುಪಾದ ಕಾಣದ ಜನ್ಮವ್ಯಾಕೆ 3

***