Showing posts with label ಜೀವ ನಿಮ್ಮದೊ ಗುರು ಭಾವ ನಿಮ್ಮದೊ ಜೀವ ಭಾವದ ಶಿವಸೂತ್ರ ನಿಮ್ಮದೊ gurumahipati. Show all posts
Showing posts with label ಜೀವ ನಿಮ್ಮದೊ ಗುರು ಭಾವ ನಿಮ್ಮದೊ ಜೀವ ಭಾವದ ಶಿವಸೂತ್ರ ನಿಮ್ಮದೊ gurumahipati. Show all posts

Wednesday, 1 September 2021

ಜೀವ ನಿಮ್ಮದೊ ಗುರು ಭಾವ ನಿಮ್ಮದೊ ಜೀವ ಭಾವದ ಶಿವಸೂತ್ರ ನಿಮ್ಮದೊ ankita gurumahipati

ಜೀವ ನಿಮ್ಮದೊ ಗುರು ಭಾವ ನಿಮ್ಮದೊ ಜೀವ ಭಾವದ ಶಿವಸೂತ್ರ ನಿಮ್ಮದೊ pa 


ಕಾಯ ಮಾಯ ನಿಮ್ಮದು ಅಂತ್ರ ಬಾಹ್ಯ ನಿಮ್ಮದು ನಿರ್ಮಿಸಿಹ್ಯ ಇದು ಉಪಾಯ ನಿಮ್ಮದು 1 

ಪೃಥ್ವಿ ಅಪ್ಪು ನಿಮ್ಮದು ತೇಜ ತತ್ತ್ವ ನಿಮ್ಮದು ವಾಯುವಾಕಾಶವೆ ತಾ ತತ್ತ್ವನಿಮ್ಮದು 2 

ಪ್ರಾಣವೇ ನಿಮ್ಮದು ಪಾನವೇ ನಿಮ್ಮದು ವ್ಯಾನ ಉದಾನ ಸಮಾನ ನಿಮ್ಮದು 3 

ಅಂತಃಕರಣ ನಿಮ್ಮದು ಬುದ್ದಿಮನ ನಿಮ್ಮದು ಚಿತ್ತ ಚೈತನ್ಯ ಚೇತನ ನಿಮ್ಮದು 4 

ನುಡಿನೋಟ ನಿಮ್ಮದು ಆಟಕೂಟ ನಿಮ್ಮದು ಕರ್ನ ಕೇಳಿಕೆಯಾಟವು ನಿಮ್ಮದು 5 

ಸ್ಥೂಲ ಸೂಕ್ಷ್ಮ ನಿಮ್ಮದು ಕಾರಣವು ನಿಮ್ಮದು ಮಹಾ ಕಾರಣವು ಆನಂದ ನಿಮ್ಮದು6 

ಜಾಗ್ರತೆ ನಿಮ್ಮದು ಶೀಘ್ರತಿ ನಿಮ್ಮದು ಪ್ರವೃತ್ತಿನಿವೃತ್ತಿ ಸುವ್ಯಕ್ತಿ ನಿಮ್ಮದು 7 

ಸ್ವಪ್ನಾವಸ್ಥೆ ನಿಮ್ಮದು ಸುಷಪ್ತಿ ನಿಮ್ಮದು ಸರ್ವಾವಸ್ಥೆಗಳ ಲಕ್ಷಣ ನಿಮ್ಮದು 8 

ಅರಹು ಮರಹು ನಿಮ್ಮದು ಖೂನ ಕುರಹು ನಿಮ್ಮದು ಸೂತ್ರ ನಿಮ್ಮದು 9 

ಇಹಪರ ನಿಮ್ಮದು ಸಾಹ್ಯ ಸರ್ವ ನಿಮ್ಮದು ಗುಹ್ಯ ಗುರುತ ದೋರುವ ಸೋಹ್ಯ ನಿಮ್ಮದು 10 

ಮಹಿಪತಿ ಜೀವ ನಿರ್ಮಿತ ಙÁ್ಞತಿ ನಿಮ್ಮದು ಸದ್ಗತಿಗೈಸುವ ಖ್ಯಾತಿ ನಿಮ್ಮದು 11

***