Showing posts with label ಜೋ ಜೋ ಜೋ ಜೋ ಜೋ ಎನ್ನ ಗುರುವೆ ಜೋ ಜೋ ಜೋ ನಿಜ bheemashankara. Show all posts
Showing posts with label ಜೋ ಜೋ ಜೋ ಜೋ ಜೋ ಎನ್ನ ಗುರುವೆ ಜೋ ಜೋ ಜೋ ನಿಜ bheemashankara. Show all posts

Friday, 6 August 2021

ಜೋ ಜೋ ಜೋ ಜೋ ಜೋ ಎನ್ನ ಗುರುವೆ ಜೋ ಜೋ ಜೋ ನಿಜ ankita bheemashankara

 ..

 kruti by ಭೀಮಾಶಂಕರರು ದಾಸರು bheemashankara


ಜೋ ಜೋ ಜೋ ಜೋ ಜೋ ಎನ್ನ ಗುರುವೆ ಜೋ ಜೋ ಜೋ ನಿಜ ಕಲ್ಪತರುವೆ ಜೋ ಜೋ ಎಂದು ಜನ್ಮಕ್ಕೆ ಬರುವೆ | ಜೋ ಜೋ ನಿಮ್ಮ ಚರಣದಲ್ಲಿರುವೆ ಜೋ ಜೋ ಪ


ಅಷ್ಟ ಸಿದ್ಧಿಗಳೆಲ್ಲ ಬಡ್ಡಿಯ ಕೊರೆಸಿ | ಗಟ್ಟ್ಯಾಗಿ ವೇದದ ಕಾಲವ ನಿಲ್ಲಿಸಿ ಅಷ್ಟತತ್ತ್ವದ ಹುರಿ ಹೆಣಿಕಿಲಿ ಬಿಗಿಸಿ | ತೊಟ್ಟಿಲೊಳರುವಿನ ಹಾಸಿಗೆ ಹಾಸೀ || ಜೋ ಜೋ 1


ಸಾಧನ ನಾಲ್ಕೆಂಬೋ ಹಗ್ಗವ ಹೊಸೆದು | ಬೋಧದ ಗಂಟು ತುದಿಯಲ್ಲಿ ಬಿಗಿದು | ನಾದ ಅನಾಹತ ಗಂಟೆಯ ಹೊಡೆದು | ಆದಿ ಗುರುವಿನ ಮಲಗಲಿ ಕರೆದು || ಜೋ ಜೋ || 2


ಕಾಲಿಗೆ ಯೋಗದ ಪಾಶವ ಕಟ್ಟಿ | ಮೂಲೈದು ಬ್ರಹ್ಮರಂಧ್ರಕ್ಕೆ ಮುಟ್ಟಿ | ಮೇಲಿನ ಜೋತೆಗೆ ಭಾಸದ ಬುಟ್ಟಿ | ಲೀಲೆಯಿಂದಲಿ ನೋಡು ಗುರುವಿನ ದೃಷ್ಟಿ || ಜೋ ಜೋ 3


ಮನಸೀಗೆ ಬಾರದ ಮಾತುಗಳಾಡಿ |ನೆನೆಹಿಗೆ ನಿಲ್ಕದ ನಿತ್ಯನ ಕೂಡಿ | ಕನಸು ಎಚ್ಚರದ ಗಾಢವ ನೋಡಿ |ಉನ್ಮನಿ ಬೆಳಗುವ ಮೂರ್ತಿಯ ಪಾಡಿ || ಜೋ ಜೋ 4


ಭಕ್ತಿ ವಿರಕ್ತಿಗೆ ಸಿಲ್ಕುವನೀತಾ | ಸತ್ಯ ಶರಣ್ಯ ಸದ್ಗುರು ನಾಥಾ | ಕರ್ತೃತ್ವ ಇಟ್ಟನು ಮೌನದಲ್ಲೀತಾ | ವೃತ್ತಿ ವಿರಹಿತ ಗಿರಿ ಪಾಲಿಸು ಗುರುತಾ || ಜೋ ಜೋ 5

***