Showing posts with label ಜೋ ಜೋ ಶ್ರೀ ಗೋಪಾಲಕೃಷ್ಣ ಮೂರುತಿಯೆ gopalakrishna vittala. Show all posts
Showing posts with label ಜೋ ಜೋ ಶ್ರೀ ಗೋಪಾಲಕೃಷ್ಣ ಮೂರುತಿಯೆ gopalakrishna vittala. Show all posts

Sunday 1 August 2021

ಜೋ ಜೋ ಶ್ರೀ ಗೋಪಾಲಕೃಷ್ಣ ಮೂರುತಿಯೆ ankita gopalakrishna vittala

ಜೋಜೋ ಶ್ರೀ ಗೋಪಾಲಕೃಷ್ಣ ಮೂರುತಿಯೆ

ಜೋಜೋ ಶ್ರೀ ರುಕ್ಮಿಣೀ ಪತಿ ಲೋಕ ದೊರೆಯೆ

ಜೋಜೋ ಈ ಲೋಕದೊಳು ನಿನಗಿನ್ನು ಸರಿಯೆ

ಜೋಜೋ ಶ್ರೀ ಗುರುಕರಾರ್ಚಿತದಿ ಬಂದ್ಹರಿಯೆ ಪ.


ತಂದೆ ಮುದ್ದುಮೋಹನರು ಕೊಟ್ಟ ಅಂಕಿತದಿ

ಪೊಂದಿದ್ದ ರೂಪ ಗ್ರಹದಲ್ಲಿ ಹೊಂದಿ

ಮುಂದೆಂಟು ವತ್ಸರಕೆ ಎನ್ನೊಡನೆ ಬಂದಿ

ತಂದೆ ಮುದ್ದುಮೋಹನರ ಕರಸ್ಪರ್ಶ ಪೊಂದಿ 1

ನಮ್ಮ ಹಿರಿಯರ ಪೂಜೆ ಒಮ್ಮೊಮ್ಮೆ ಎಂದು

ಒಮ್ಮೆ ದುರುಳನು ಮುಟ್ಟೆ ಮಲಿನಾದೆನೆಂದು

ನಮ್ಮ ಗುರು ಕರಸ್ಪರ್ಶದಿಂ ಪುನಃ ಬಂದು

ರಮ್ಮೆ ಪತಿ ಎನ್ನ ಕರಪೂಜೆ ಬೇಕೆಂದು 2

ಘನ್ನ ಗುಣರು ನಿನ್ನ ಪೂಜಿಸಿ ಪೋಗಲಂದು

ಮನೆ ಪೆಟ್ಟಿಗೆಯೊಳ್ ಸುಮ್ಮನಿರಲಾರೆನೆಂದು

ಮನಕೆ ಪ್ರೇರಿಸೆ ದುರುಳರಿಗೆ ಕದ್ದು ಒಯ್ದು

ಘನ ಮೂರ್ತಿಗಳು ಪೋಗೆ ನೀನೊಬ್ಬ ಬಂದು 3

ಬಹುದಿವಸ ಮಲಿನವಾಗಿರುತಿರಲು ನೀನು

ಮಹಮಹಿಮೆ ಅರಿಯಲಿಲ್ಲಾಗ ನಾನಿನ್ನು

ಅಹಹ ನಮ್ಮ ಗುರುಗಳೆರೆಯಲು e್ಞÁನವನ್ನು

ಮಹಿಯೊಳೆನ್ನ ಪೂಜೆಯನು ಬಯಸಿದೆಯೊ ನೀನು 4

ಮನದಲ್ಲಿ ಪ್ರೇರಿಸಲು ಘನವಲ್ಲವೆಂದು

ಕನಸಿನಲಿ ಎನ್ನ ಹಸ್ತದೊಳ್ ಬಂದು ನಿಂದು

ಸನುಮತದಿ ಹರುಷದಲಿ ನಿನ್ನ ನಾ ತಂದು

ಘನ ಮಹಿಮ ಗುರುಗಳಿಗೆ ಒಪ್ಪಿಸಲು ಅಂದು 5

ಅಂತರಾತ್ಮನ ಗುರುವು ವಿಗ್ರಹದೊಳಿಟ್ಟು

ಸಂತೋಷದಿಂದ ಮನಮುಟ್ಟಿ ಕೊಡಲಷ್ಟು

ಅಂತಾಯ್ತು ಮಲಿನ ಕುಂದಿತು ತೇಜವೆಷ್ಟು

ನಿಂತೆನ್ನ ಕೈಲಿ ಪೂಜೆಯಗೊಂಬ ಗುಟ್ಟು 6

ದಿನದಿನಕೆ ಭಜನೆ ಪೂಜೆಯನೆಗೊಂಬ ಚಂದ

ಘನಭಕ್ತರನು ಪೊರೆವ ಬಿರುದು ಆನಂದ

ಮುನಿಜನರ ಮೋಹಕನೆ ಸಚ್ಚಿದಾನಂದ

ಎನಗೊಲಿದೆ ಗೋಪಾಲಕೃಷ್ಣ ಗೋವಿಂದ 7

ರಮೆ ಬ್ರಹ್ಮ ಸುರರಿಗೆ ಸರಿ ಪೂಜಿಸುವೆನೆ

ಕಮಲಾಕ್ಷ ಅಣು ನಾನು ನಿನ್ನ ಒಲಿಸುವೆನೆ

ರಮಣೀಯವಾದ ವಸ್ತುಗಳ ನಾ ತಹೆನೆ

ಕ್ಷಮಿಸು ನಿನ್ನ ದಾಸಿ ನನ್ನಪರಾಧಗಳನೆ 8

ಅಂತರಂಗದಲಿಪ್ಪ ಬಿಂಬ ಮೂರುತಿಯೆ

ನಿಂತು ಈ ವಿಗ್ರಹದಿ ಈ ರೀತಿ ಮೆರೆಯೆ

ಸಂತೋಷ ನೋಳ್ಪರಿಗೆ ಕೊಡು ಭಕ್ತಿ ಹರಿಯೆ

ಕಂತುಪಿತ ಕಮಲಾಕ್ಷ ಕಾಯೊ ಸಿರಿದೊರೆಯೆ 9

ಪೂಜ್ಯಪೂಜಕನೆಂದು ಪೂಜೆ ಮಾಡುವೆನೊ

ಮೂರ್ಜಗತ್ಪತಿ ನಿನ್ನ ಲಾಲಿ ಪಾಡುವೆನೊ

ಪೂಜ್ಯ ಶ್ರೀ ಗೋಪಾಲಕೃಷ್ಣವಿಠ್ಠಲ ನೀನು

ಗೋಜು ಬೇಡನ್ಯರದು ಪೊರೆಯೊ ದಾಸರನು 10

****