Showing posts with label ಜ್ಞಾನದ ನಡಿಬ್ಯಾರೆ ತತ್ವಜ್ಞಾನದ ನಡಿ ಬ್ಯಾರೆ mahipati. Show all posts
Showing posts with label ಜ್ಞಾನದ ನಡಿಬ್ಯಾರೆ ತತ್ವಜ್ಞಾನದ ನಡಿ ಬ್ಯಾರೆ mahipati. Show all posts

Wednesday 1 September 2021

ಜ್ಞಾನದ ನಡಿಬ್ಯಾರೆ ತತ್ವಜ್ಞಾನದ ನಡಿ ಬ್ಯಾರೆ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಜ್ಞಾನದ ನಡಿಬ್ಯಾರೆ ತತ್ವಜ್ಞಾನದ ನಡಿ ಬ್ಯಾರೆ pa


ದೇಹದಂಡನೆ ಮಾಡಿದರೇನು ಬಾಹ್ಯಾರಂಜನೆ ದೋರಿದರೇನು 1 

ಶಬ್ದ ಜ್ಞಾನ ಸೂರಾಡಿದರೇನು ಲಭ್ದಾ ಲಬ್ಧೇಲಾಡಿದರೇನು 2 

ರಿದ್ದಿ ಸಿದ್ದಿಯ ದೋರಿದರೇನು ಗೆದ್ದು ಮಂತ್ರಾಂತ್ರಸೋಲಿಪರೇನು 3 

ಗೀರ್ವಾಣ ಆಡಿದರೇನು ಭೂತ ಭವಿಷ್ಯ ಹೇಳಾಡಿದರೇನು 4 

ವ್ರತ ತಪ ತೀರ್ಥಾಶ್ರೈಸಿದರೇನು ಕೃತ ಕೋಟ್ಯಜ್ಞಾವ ಮಾಡಿದರೇನು 5 

ಯೋಗಾಯೋಗಾಚರಿಸಿದರೇನು ಭೋಗ ತ್ಯಾಗ ಮಾಡಿದರೇನು6 

ಏನು ಸಾಧನೆ ಮಾಡಿದಫಲವೇನು ಖೂನ ದೋರದೆ ಮಹಿಪತಿಗುರುತಾನು7

***