Showing posts with label ಜ್ಞಾನವಂತರ ಸಂಗವಿರಲು ಸ್ನಾನವ್ಯಾತಕೆ mohana vittala JNAANAVANTARA SANGAVIRALU SNAANAVYAATAKE. Show all posts
Showing posts with label ಜ್ಞಾನವಂತರ ಸಂಗವಿರಲು ಸ್ನಾನವ್ಯಾತಕೆ mohana vittala JNAANAVANTARA SANGAVIRALU SNAANAVYAATAKE. Show all posts

Sunday, 1 August 2021

ಜ್ಞಾನವಂತರ ಸಂಗವಿರಲು ಸ್ನಾನವ್ಯಾತಕೆ ankita mohana vittala JNAANAVANTARA SANGAVIRALU SNAANAVYAATAKE



ಜ್ಞಾನವಂತರ ಸಂಗವಿರಲು ಸ್ನಾನವ್ಯಾತಕೆ ಪ


ನಾನು ಎಂಬುದ ಬಿಟ್ಟ ಮೇಲೆ ನರಕವ್ಯಾತಕೆ ಅ.ಪ.


ಮೃತ್ತಿಕೆ ಶೌಚ ಮಾಡದವನ ಆಚಾರವ್ಯಾತಕೆಸತ್ಯವಾದಿ ಆಗದವನ ನಂಬಿಗೆ ಯಾತಕೆ ||ಚಿತ್ತಶುದ್ಧಿ ಇಲ್ಲದವನ ವೈರಾಗ್ಯವ್ಯಾತಕೆಉತ್ತಮ ಹಿರಿಯರಿಲ್ಲದಂಥ ಸಭೆಯು ಯಾತಕೆ 1

ಪತಿಯ ಆಜ್ಞೆ ಮೀರಿದವಳ ವ್ರತಗಳ್ಯಾತಕೆಸತಿಗೆ ಅಳುಕಿ ನಡಿಯುವವನ ಸಾಹಸವ್ಯಾತಕೆ ||ಯತಿಯ ನಿಂದೆ ಮಾಡುವವನ ಮತಿಯು ಯಾತಕೆಅತಿ ವಿರೋಧ ಬಡಿಸುವಂಥ ಅಣ್ಣನ್ಯಾತಕೆ 2

ಹರಿಕಥೆಯ ಕೇಳದವನ ಕಿವಿಯು ಯಾತಕೆಮುರಹರನ ಮೂರ್ತಿಯ ನೋಡದಂಥ ಕಂಗಳ್ಯಾತಕೆ ||ಮರುತ ಮತವ ಪೊಂದದವನ ಬಾಳ್ವೆ ಯಾತಕೆಎರಡಾರು ನಾಮವಿಡದ ಶರೀರವೇತಕೆ3

ತಂದೆ ತಾಯಿ ಮಾತು ಕೇಳದ ಮಕ್ಕಳ್ಯಾತಕೆಬಂಧು ಬಳಗ ಉಳ್ಳದವನ ಭಾಗ್ಯವ್ಯಾತಕೆ ||ಬಂದ ಅತಿಥಿಗನ್ನವನಿಕ್ಕದ ಸದನವೇತಕೆ ಗೋ-ವಿಂದನಂಘ್ರಿ ಸ್ಮರಿಸದಂಥ ನಾಲಿಗ್ಯಾತಕೆ 4

ಮಕ್ಕಳನ್ನ ಮಾರಿಕೊಂಬ ತಂದೆಯಾತಕೆರೊಕ್ಕಕಾಗಿ ಬಡಿದಾಡುವ ತಮ್ಮನ್ಯಾತಕೆ ||ಕಕ್ಕುಲಾತಿ ಬಡುವ ಸಂನ್ಯಾಸವ್ಯಾತಕೆಠಕ್ಕು ಭಕುತಿ ಮಾಡುವಂಥ ದಾಸನ್ಯಾತಕೆ 5

ಆಗಿ ಬರದವರ ಅನ್ನ ಉಣ್ಣಲ್ಯಾತಕೆರೋಗವಾದ ನರಗೆ ಹೆಣ್ಣಿನ ಭೋಗವ್ಯಾತಕೆ ||ಯೋಗಿಯಾದ ಮೇಲೆ ದ್ರವ್ಯದ ಆಶೆಯಾತಕೆಭಾಗೀರಥಿಯ ಮಿಂದ ಮೇಲೆ ಪಾಪವ್ಯಾತಕೆ 6

ವೇದವನ್ನು ಓದದಂಥ ವಿಪ್ರನ್ಯಾತಕೆಕಾದೊ ರಣಕೆ ಅಂಜುವಂಥ ಕ್ಷತ್ರಿಯನ್ಯಾತಕೆ ||ವಾದವನ್ನು ಮಾಡುವಂಥ ಬಂಟನ್ಯಾತಕೆಸಾಧುಗಳಿಗೆ ಎರಗದವನ ಶಿರವಿದ್ಯಾತಕೆ 7

ಯಾತ್ರೆ ತೀರ್ಥ ಮಾಡದಂಥ ಪಾದವ್ಯಾತಕೆಪಾತ್ರರ ಸಂಗವಾಗದವನ ಜನ್ಮವ್ಯಾತಕೆ ||ಸ್ತೋತ್ರಕೆ ಮರುಳಾಗುವವಗೆ ಸಾಧನ್ಯಾತಕೆಪಾರ್ಥ ಸಖನ ತಿಳಿಯದವನ ಜ್ಞಾನವ್ಯಾತಕೆ 8

ಗುರೂಪದೇಶವಿಲ್ಲದಂಥ ಮಂತ್ರವ್ಯಾತಕೆಅರಿತು ವಿದ್ಯ ಪೇಳದ ಉಪಾಧ್ಯನ್ಯಾತಕೆ ||ಹರುಷವನ್ನು ತಾಳದಂಥ ಜ್ಞಾನಿ ಯಾತಕೆಕರಣ ಶುದ್ಧಿ ಇಲ್ಲದವನ ಸ್ನೇಹವ್ಯಾತಕೆ 9

ಕಣ್ಣು ಕಾಣದ ಕುರುಡನಿಗೆ ಕನ್ನಡಿ ಯಾತಕೆಘನ್ನ ಗಾಣ ಕಟ್ಟಿದೆತ್ತಿಗೆ ಗೆಜ್ಜೆಯಾತಕೆ ||ರಾಣಿ ಇಲ್ಲದವನು ಮಾಡುವ ಬದುಕು ಯಾತಕೆತಾನು ಉಣ್ಣದೆ ಪರರಿಗಿಕ್ಕದ ಧನವಿದ್ಯಾತಕೆ 10

ಧರ್ಮವಿಲ್ಲದೆ ರಾಜ್ಯ ಆಳುವ ಪ್ರಭುವಿದ್ದ್ಯಾತಕೆಮರ್ಮವರಿತು ನಡೆಯದಂಥ ಹೆಣ್ಣು ಯಾತಕೆ ||ನಿರ್ಮಲಾಂಗನಾದ ಮೋಹನ ವಿಠಲನ ಗುಣಕರ್ಮ ಕ್ರಿಯಾ ತಿಳಿದ ಮ್ಯಾಲೆ ನಿರ್ಣಯವ್ಯಾತಕೆ 11

***