ಕಾಖಂಡಕಿ ಶ್ರೀ ಮಹಿಪತಿರಾಯರು
ತನುಲಂಪಟಗೆ ಎಲ್ಲಿಹುದು ತನ್ನೊಳು ಖೂನ pa
ದೆಸೆಗೆಟ್ಟವಗೆ ಎಲ್ಲಿಹುದು ಯುಕ್ತಿಯು ಮುಸುಕಿದ ಮಾಯದವಗೆಲ್ಲಿಹುದು ಮುಕ್ತಿಯು ಹುಸಿಯಾಡುವವಗೆಲ್ಲಿಹುದು ಋಷಿಭಕ್ತಿಯು 1
ತರಳಗುಂಟೆ ಭಯವು ಘಟಸರ್ಪದ ಎರಳೆಗುಂಟೆ ಖೂನ ಮೃಗಜಲವೆಂಬುವದ ಸೋರೆಗುಂಟೆ ಮಾತು ಚಾರ್ತುಯದ 2
ಕನಸು ಕಾಂಬವಗೆ ಎಲ್ಲಿಹುದು ತಾನಿಹ ಸ್ಥಾನ ಮನದಿಚ್ಛೆಯಿದ್ದವಗೆ ಎಲ್ಲಿ ಧ್ಯಾನ ದೀನಮಹಿಪತಿ ಸ್ವಾಮಿ ಕಾಣದವಗೆಲ್ಲಿ ಘನ ಅನುಭವಿಸಿಕೊಳದೆ ಜನ್ಮಕೆ ಬಂದಿದೇನ 3
***