Showing posts with label ತಪ್ಪಲರಿಯದು ಬರೆದ ಬ್ರಹ್ಮನಿರ್ಮತವು ಒಪ್ಪುವದು ಯತಿ ಮುನಿ mahipati. Show all posts
Showing posts with label ತಪ್ಪಲರಿಯದು ಬರೆದ ಬ್ರಹ್ಮನಿರ್ಮತವು ಒಪ್ಪುವದು ಯತಿ ಮುನಿ mahipati. Show all posts

Wednesday, 1 September 2021

ತಪ್ಪಲರಿಯದು ಬರೆದ ಬ್ರಹ್ಮನಿರ್ಮತವು ಒಪ್ಪುವದು ಯತಿ ಮುನಿ ankita mahipati


ಕಾಖಂಡಕಿ ಶ್ರೀ ಮಹಿಪತಿರಾಯರು

ತಪ್ಪಲರಿಯದು ಬರೆದ ಬ್ರಹ್ಮನಿರ್ಮತವು ಒಪ್ಪುವದು ಯತಿ ಮುನಿ ಋಷಿಯ ಸಂತತಿಯು ಪ  


ಆನಿ ಮೊದಲಿರುವೆ ಕಡೆ ಅಣುಮಾತ್ರಾಕಾರವನು ಮುನ್ನ ಬರೆದಂತೆ ತಾನಡೆಯುತಿಹಂದು ಇನ್ನು ಮುತ್ತನ್ಯ ದೈವಕ ಬಯಸಿ ಬೇಡಿದರೆ ಮುನ್ನಿಗೆ ಕೊಡಬಲ್ಲವೆ ಬಿನಗುದೈವವು 1

ಭಿನ್ನವಿಲ್ಲದೆ ತನುವಿನೊಳು ಆನಂದ ಘನ ಉನ್ನತ ಮಹಿಮ ಪರಿಪೂರ್ಣವಿರಲು ಮೂರ್ತಿ ಶ್ರೀಪಾದವನು ಅನುದಿನ ಭಜಿಸಿ ಘನ ಸುಖವ ಪಡಿಯೊ ಮನವೆ 2 

ಕಕ್ಕುಲಾತಿಯ ಬಟ್ಟು ಕಂಡವರ ಕಾಲ್ಗೆರಗಿ ಫಕ್ಕಸಾರಿಯ ಧರ್ಮ ಜರಿಯ ಬ್ಯಾಡ ಸಕಲ ಸಹಕಾರ ಮಹಿಪತಿಸ್ವಾಮಿ ನಿನಗಿರಲು ಭಕುತಿ ಮುಕುತಿಯ ಉಂಟು ಮೂಢ ಜನವೆ 3

***