ಪುರಂದರದಾಸರು
ತಾನು ಮಾಡಿದಕರ್ಮ ತನಗಲ್ಲದೆ |
ಏನ ಮಾಡಿದರು ಹಿಂದಿನ ಕರ್ಮವಲ್ಲದೆ ಪ.
ಮರಳಿ ಮರಳಿ ನೀರ ಹೊಕ್ಕು ಹೊರಟರೆ ಇಲ್ಲ |ಹೊರೆ ಹೊತ್ತು ತಲೆಪರಟೆಗಟ್ಟಿದರೂ ಇಲ್ಲ ||ಬರಿಯೆ ಭೂಮಿಯ ಕೆದರಿ ತೋಡಿ ನೋಡಿದರಿಲ್ಲ |ಪರರಿಗೆ ಬಾಯ್ದೆರೆದರೇನೊ ಇಲ್ಲ 1
ಬಲಿದ ದೇಹವನಲ್ಪ ಮಾಡಿ ಬೇಡಿದರಿಲ್ಲ |ನೆಲದಿ ಕೊಲೆಗಡುಕ ತಾನಾದರಿಲ್ಲ ||ತಲೆಯಲಿ ಜಡೆಗಟ್ಟಿ ಅಡವಿ ಸೇರಿದರಿಲ್ಲ - |ಕೊಳಲೂದಿ ತುರುಗಳನು ಕಾಯ್ದರಿಲ್ಲ 2
ಧೀರತನ ಬಿಟ್ಟು ದಿಗಂಬರನಾದರು ಇಲ್ಲ |ಮೀರಿದ್ದರಾಹುತ ತಾನಾದರಿಲ್ಲ ||ವರದ ಶ್ರೀ ಪುರಂದರವಿಠಲನ ಚರಣವ |ಸ್ಮರಿಸುತಅನುದಿನ ಸುಖಿಯಾಗಿರಯ್ಯ3
********