Showing posts with label ತಾಳಲ್ಲಲ್ಲಲ್ಲಲ್ಯೋ ಮಾಸಾಳಲ್ಲಲ್ಲಲ್ಲಲ್ಯೋ neleyadikeshava. Show all posts
Showing posts with label ತಾಳಲ್ಲಲ್ಲಲ್ಲಲ್ಯೋ ಮಾಸಾಳಲ್ಲಲ್ಲಲ್ಲಲ್ಯೋ neleyadikeshava. Show all posts

Wednesday, 1 September 2021

ತಾಳಲ್ಲಲ್ಲಲ್ಲಲ್ಯೋ ಮಾಸಾಳಲ್ಲಲ್ಲಲ್ಲಲ್ಯೋ ankita neleyadikeshava

 ..

ತಾಳಲ್ಲಲ್ಲಲ್ಲಲ್ಯೋ ಮಾಸಾಳಲ್ಲಲ್ಲಲ್ಲಲ್ಯೋ ಪ


ಹೆಚ್ಚಿದ ತಮನೆಂಬ ದನುಜ ವೇದವ ಕದ್ದುಬಚ್ಚಿಟ್ಟು ನೀರೊಳು ಮುಳುಗಿರಲುಮಚ್ಚ ರೂಪದಿಂದ ಪೋಗಿ ಅವನ ಕೊಂದಅಚ್ಯುತರಾಯನೆಂಬ ಮಾಸಾಳಮ್ಮ1


ಸಿಂಧು ಮಥನವ ಮಾಡೆ ಅಮರರೆಲ್ಲರುಮಂದರಗಿರಿ ನೀರೊಳು ಮುಳುಗಲುಚಂದದಿ ಕೂರ್ಮ ರೂಪಿನಿಂದೆತ್ತಿದ ಗೋ-ವಿಂದನೆಂಬುವ ಮಾಸಾಳಮ್ಮ2


ರೂಢಿಯ ಕದ್ದುಕೊಂಡೋಡುವ ದೈತ್ಯನನೀಡಿ ತಿವಿದು ಕೋರೆದಾಡೆಯಿಂದದೂಡಿ ದ್ವಂಸವ ಮಾಡಿ ರೂಢಿಯ ತಂದಕಾಡು ವರಾಹ ರೂಪಿ ಮಾಸಾಳಮ್ಮ 3


ಲೇಸು ತಪ್ಪಿದನೆಂದು ಹಿರಣ್ಯಕ ತನಯನಘಾಸಿ ಮಾಡಲು, ಕಂಬ ಒಡೆದುದಿಸಿರೋಷದಿ ದೈತ್ಯನ ಕರುಳ ಕಿತ್ತ ನರಕೇಸರಿ ರೂಪಿನ ಮಾಸಾಳಮ್ಮ 4


ಆ ಮಹಾಸಿರಿಯ ಗರ್ವದಿ ಮುಂದರಿಯದೆಭೂಮಿಯನು ಬಲಿ ತಾನಾಳುತಿರೆನೇಮಿಸಿ ಎರಡೇ ಹೆಜ್ಜೆಯೊಳಳಕೊಂಡವಾಮನ ರೂಪಿನ ಮಾಸಾಳಮ್ಮ 5


ಕಾಮಧೇನುವಿಗಾಗಿ ಕಾರ್ತವೀರ್ಯಾರ್ಜುನಆ ಮಹಾಮುನಿಯ ಪ್ರಾಣಕೆ ಮುನಿಯೆತಾಮಸವಿಲ್ಲದೆ ಕ್ಷತ್ರಿಯರ ಸಂಹರಿಸಿದರಾಮ ಭಾರ್ಗವನೆಂಬ ಮಾಸಾಳಮ್ಮ 6


ಜನಕ ಸುತೆಯನು ಕದ್ದೊಯ್ಯಲು ಲಂಕೆಗೆಗಣಿತಾತೀತ ಶರಧಿಯ ಕಟ್ಟಿಘನ ಕೋಪದಿ ದಶಿಶಿರನ ಕತ್ತರಿಸಿದಇನಕುಲ ರಾಮನೆಂಬ ಮಾಸಾಳಮ್ಮ 7


ದೇವಕಿ ಬಸುರೊಳು ಬಂದು ಗೋಕುಲದಿಆವ ಕಾವ ಗೊಲ್ಲರ ಸಲಹಿಮಾವನ ಕೊಂದು ಮತ್ತೈವರ ಸಲಹಿದದೇವ ಕೃಷ್ಣನೆಂಬ ಮಾಸಾಳಮ್ಮ8


ಪತಿವ್ರತೆಯರ ವ್ರತವಳಿಯಬೇಕೆನುತಲಿಅತಿಶಯದಿ ತ್ರಿಪುರದ ಸ್ತ್ರೀಯರನುತ ಬೌದ್ಧ ರೂಪದಿ ಬಹು ಭಂಗಪಡಿಸಿದರತಿಪತಿಪಿತನೆಂಬ ಮಾಸಾಳಮ್ಮ 9


ಖುಲ್ಲ ಮನುಜರನು ಕೊಲ್ಲಬೇಕೆನುತಲಿಭಲ್ಲೆ ಹಿಡಿದು ತುರಗವನೇರಿಅಲ್ಲಲ್ಲೆ ಸೊಲ್ಲಡಗಿಸಿ ವಲ್ಲಭನೆನಿಸಿದಬಲ್ಲಿದ ಕಲ್ಕಿಯೆಂಬ ಮಾಸಾಳಮ್ಮ 10


ಮಂಗಳ ಮಹಿಮ ಭುಜಂಗ ಶಯನ ಕಾ-ಳಿಂಗ ಮರ್ದನ ದೇವೋತ್ತುಂಗಅಂಗಜಪಿತ ನೆಲೆಯಾದಿಕೇಶವ ಅಂತ-ರಂಗದೊಳಿರುವ ಮಾಸಾಳಮ್ಮ 11

***