Showing posts with label ತಿರುದುಂಬುವ ನೀನು ತಿರುಮಲೇಶಾ ಮರುಗಲ್ಯಾತಕೆ vijaya vittala TIRIDUMBUVA NEENU TIRUMALESHA MARUGALYAATAKE. Show all posts
Showing posts with label ತಿರುದುಂಬುವ ನೀನು ತಿರುಮಲೇಶಾ ಮರುಗಲ್ಯಾತಕೆ vijaya vittala TIRIDUMBUVA NEENU TIRUMALESHA MARUGALYAATAKE. Show all posts

Sunday, 5 December 2021

ತಿರುದುಂಬುವ ನೀನು ತಿರುಮಲೇಶಾ ಮರುಗಲ್ಯಾತಕೆ ankita vijaya vittala TIRIDUMBUVA NEENU TIRUMALESHA MARUGALYAATAKE

ತಿರುದುಂಬುವ ನೀನು ತಿರುಮಲೇಶಾ
ಮರುಗಲ್ಯಾತಕೆ ಇನ್ನು ಮನಸಿನೊಳಗೆ ಪ್ರತಿದಿನವು ಪ

ಬಲಿರಾಯ ಬಲು ದಾನವನು ಮಾಡುತಿರಲಾಗಿ
ಇಳಿಯ ಸುರÀವೇಷವನು ಧರಿಸಿ ಪೋಗಿ
ಹಲುಬಿ ಬಾಯಿದೆರದು ತ್ರಿಪಾದ ತಿರಕೆ ಕೊಂಡು
ನಿಗಮ ಕುಲದಾತಾರಾ 1

ಗೋಪಳ್ಳಿಯಲಿ ಜನಿಸಿ ಗೋವುಗಳ ಕಾವುತ್ತ
ಗೋಪಾಲತತಿ ವಡನೆ ವಡನಾಡುತ
ತಾಪಸರು ಯಜ್ಞ ಕರ್ಮಾದಿಗಳು ಮಾಡುತಿರೆ
ಶ್ರೀಪತಿ ಅನ್ನ ತಿರಿದುಂಡು ಕ್ಷುದಿಯನ್ನ ಕಳೆದೆ 2

ಅಂದು ಈ ಪರಿಯ ಯಾಚಕ ವೃತ್ತಿಯನು ಮಾಡಿ
ಇಂದೆನ್ನ ಹೃತ್ಕಮಲದೊಳಗೆ ಬಂದೂ
ನಿಂದು ಮನೆಮನೆ ತಿರದುಂಬುವ ನೀನಲ್ಲವೆ
ಸಂದೇಹವೇಕೆ ಎನಗೆ ವಿಜಯವಿಠ್ಠಲರೇಯಾ 3
*********