Showing posts with label ತಿಳಿದು ನೋಡಿ ತನುವಿನೊಳು ತಮ್ಮ ನಿಜಖೂನ ಸುಳುಹು mahipati. Show all posts
Showing posts with label ತಿಳಿದು ನೋಡಿ ತನುವಿನೊಳು ತಮ್ಮ ನಿಜಖೂನ ಸುಳುಹು mahipati. Show all posts

Wednesday, 1 September 2021

ತಿಳಿದು ನೋಡಿ ತನುವಿನೊಳು ತಮ್ಮ ನಿಜಖೂನ ಸುಳುಹು ankita mahipati

 ತಿಳಿದು ನೋಡಿ ತನುವಿನೊಳು ತಮ್ಮ ನಿಜಖೂನ ಸುಳುಹು ದೋರಿಕುಡುವ ನೋಡಿ ನಿಜಾನಂದ ಘನ ಪ  


ತಮ್ಮ ಶುದ್ಧಿ ತಮಗಿಲ್ಲವೊ ಹೆಮ್ಮೆ ಬಹಳ ಘಮ್ಮ ಆದರೆ ಎಲ್ಲ ನೋಡಿ ಹೊಕ್ಕು ಮೃಗಜಲ ನಮ್ಮ ನಿಮ್ಮದೆಂದು ಹೊಡೆದಾಡಿ ಬಿತ್ತು ಬೀಳ ಸಮ್ಯಗ್ ಜ್ಞಾನದಿಂದ ತಿಳಿದವನೆ ವಿರಳ 1 

ತನ್ನ ತಾ ತಿಳಿದವಗೇನು ಭಿನ್ನಭೇದವಿಲ್ಲ ಉನ್ಮನವಾಗಿ ಪೂರ್ಣ ತಿಳಿದವನೆ ಬಲ್ಲ ಧನ್ಯವಾದ ಮಹಿಮರಿನ್ನು ಮನಿಮನಿಗೆ ಇಲ್ಲ ಕಣ್ಣಾರೆ ಕಾಣುತಿಹ್ಯ ಗುಪ್ತಗುಹ್ಯವೆಲ್ಲ 2 

ತಿಳುಹದೋರಿಕೊಟ್ಟ ಗುರು ಎನ್ನೊಳÀಗೆ ಪೂರ್ಣ ಹೊಳೆಹುತಿಹ್ಯಾನಂದ ಘನಸದ್ಗುರು ಪೂರ್ಣ ಥಳಥಳಿಸುತಿಹದು ಸದ್ಗತಿ ಸಾಧನ ಕಳೆದ ಮಹಿಪತಿ ನೋಡಿ ಜನನ ಮರಣ 3

****