Showing posts with label ತಿಳಿವಳಿಕೆಯಲಿ ನಡಿ ಮನುಜಾ ಯಮನಲಿ ಆಗೊ aiholevenkatesha. Show all posts
Showing posts with label ತಿಳಿವಳಿಕೆಯಲಿ ನಡಿ ಮನುಜಾ ಯಮನಲಿ ಆಗೊ aiholevenkatesha. Show all posts

Monday, 2 August 2021

ತಿಳಿವಳಿಕೆಯಲಿ ನಡಿ ಮನುಜಾ ಯಮನಲಿ ಆಗೊ ankita aiholevenkatesha

ತಿಳಿವಳಿಕೆಯಲಿ ನಡಿ ಮನುಜಾ ಯಮನಲಿ ಆಗೊ ಭವಣೆಯು ತಪ್ಪದು ನೈಜಾ ಪ.

ಸುಳ್ಳು ಮಾತುಗಳಾಡೋರಿಲ್ಲೆ ನಿನ್ನಹಲ್ಲು ಕಿತ್ತಿಸಿ ಕಡಿ ಘಾಕುವರಲ್ಲೆಕಳ್ಳತನವ ಮಾಡೋದಿಲ್ಲೆ ಬೆನ್ನಸೆಳ್ಳಿಯಬ್ಬಿಸೆ ಕೈಯ ಕಡಿಸುವರಲ್ಲೆ 1

ದತ್ತಾಪಹಾರ ಮಾಡೋದಿಲ್ಲೆ ಜಿಂಹ್ವಕತ್ತರಿಸುವರೆಲೊ ಅಂತಕರಲ್ಲೆವೃತ್ತಿಛೇದನ ಮಾಡೋದಿಲ್ಲೆ ನಿನ್ನಎತ್ತಿ ಹಾಕುವರೊ ಕುಂಭೀಪಾಕದಲ್ಲೆ 2

ಪರಸತಿಯರನಪ್ಪೋದಿಲ್ಲೆ ನಿನ್ನಉರಿವ ಉಕ್ಕಿನ ಕಂಭ ತೆಕ್ಕಿಸೋರಲ್ಲೆಮರವಿ ಮೋಸವ ಮಾಡೋದಿಲ್ಲೆ ನಿನ್ನಪರಿಪರಿ ಭವಣಿಯ ಬಡಿಸುವರಲ್ಲೆ 3

ಪ್ರಾಣಹಿಂಸೆಯ ಮಾಡೋದಿಲ್ಲೆ ಕಲ್ಲಗಾಣದೊಳಗೆ ಇಕ್ಕಿ ತಿರಗಿಸೋರಲ್ಲೆಮಾನಿನಿಯರ ನೋಡೋದಿಲ್ಲೆ ಶಸ್ತ್ರಪೋಣಿಸಿ ಕಂಣಾ ಮೀಟಿಸುವರೋ ಅಲ್ಲೆ 4

ಹೇಸಿ ವಿಷಯ ನಂಬೋದಿಲ್ಲೆ ಸೀಸ

ಕಾಶಿ ಹೊಯ್ಯುವರೆನೊ ನಿನ್ನ ಬಾಯಲ್ಲೆದೂಷಣ ನಿಂದಗಳಿಲ್ಲೆ ಬಲುದೋಷಿಯೆನ್ನುತ ನಿನ್ನ ಘಾಸಿಪರಲ್ಲೆ 5

***