ಕಾಖಂಡಕಿ ಶ್ರೀ ಮಹಿಪತಿರಾಯರು
ತೊಡಕ ಹರವ ಮಾಡಿಕೊಳ್ಳಿರೊ ಹುಟ್ಟಿ ಬಾಹ್ವ ಮನುಜರೆಲ್ಲ ಪ
ನಾನು ನನ್ನದೆಂದು ಜ್ಞಾನಹೀನನಾಗಿ ಬಾಳುತಿಹ್ಯ ಗಾಣ-ದೆತ್ತಿನಂತೆ ಮುಂದೆಗಾಣದಿಹ್ಯ ಭ್ರಮೆಯದ 1
ಜೀವ ಶಿವ ದಾವದೆಂದು ಠಾವಿಕಿಲ್ಲ ದಿಹ್ಯದಾಗಿ ನಾವು ನೀವು ಎಂದು ಹ್ಯಾವ ಹೊಮ್ಮಿ ಹೊಡೆದಾಡುವ 2
ಸಂಚಿತ ಪ್ರಾರಬ್ಧ ಕ್ರಿಯಮಾಣದೊಳು ಸಿಲ್ಕಿ ಪ್ರ ಪಂಚ ಪರಮಾರ್ಥ ದಾವದೆಂದು ಮುಂಚೆ ತಿಳಿಯದ 3
ತನವು ತಾನೆಂದು ಘನವು ಮರೆದು ದಣಿದು ತಿರುಗುತಿಹ್ಯ ಮನದ ಮಾಯದೊಳು ಸಿಲ್ಕಿ ತನಗೆ ತಾಂ ತಿಳಿಯದೆ 4
ತೊಡಕು ಹರವ ಮಾಡಿಗೊಳ್ಳಿ ಪಡದು ಙÁ್ಞನಭಕ್ತಿಯಿಂದ ಮೂಢ ಮಹಿಪತಿಯನ್ನೊಡೆಯ ಬಿಡದೆ ನೆಲೆಗೊಳ್ಳುವ್ಹಾಂಗೆ 5
***