ತ್ರಾಹಿ ತ್ರಾಹಿ ಎನ್ನಿರೊ ತ್ರೈಲೋಕ್ಯದೊಡಿಯಗೆ ತ್ರಾಹಿ ತ್ರಾಹಿ ಎನ್ನಿರೊ ತಾರಕ ಬ್ರಹ್ಮಗೆ ಪ
ಕಾಮ ಕ್ರೋಧ ಸುಟ್ಟು ಹೋಳಿಯಾಡುವ ಬನ್ನಿರೊ ಪ್ರೇಮ ಪ್ರೀತಿಯಿಂದ ಕುಣಿದಾಡುವ ಬನ್ನಿರೊ 1
ಭೇದವಳಿದು ಸಾಧು ಜನರ ಕೂಡಿಕೊಂಬ ಬನ್ನಿರೊ ಮದ ಮತ್ಸರವ ಬೂದಿ ಮಾಡಿಚೆಲ್ಲುವ ಬನ್ನಿರೊ 2
ಏಕರಂಗವಾಗಿ ಓಕುಳ್ಯಾಡವ ಬನ್ನಿರೊ ಜೀಕಳಿಯ ಮಾಡಿ ಮಾಯ ಮೋಹ ಎಸುವ ಬನ್ನಿರೊ 3
ಎಲ್ಲರೊಳಗಿಹ ನಮ್ಮ ಪುಲ್ಲನಾಭ ಚಲುವನೊ ಬಲ್ಲ ಮಹಿಮನಿಗೆ ನೆಲೆಯ ನೋಡಿ ಒಲಿವನೊ 4
ಹೋಳಿಯಾಡಿದನು ನೋಡಿ ಇಳಿಯೊಳಗ ಮಹಿಪತಿಯು ಕಳೆದು ಕಲ್ಪನೆ ಕೋಟಿಲಿಂದ ಗೆದ್ದ ನೋಡಿರೊ 5
****