Showing posts with label ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಗುರುನಾಥ ಬಾಹ್ಯಾಂತ್ರ ಪರಿಪೂರ್ಣ mahipati. Show all posts
Showing posts with label ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಗುರುನಾಥ ಬಾಹ್ಯಾಂತ್ರ ಪರಿಪೂರ್ಣ mahipati. Show all posts

Wednesday, 1 September 2021

ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಗುರುನಾಥ ಬಾಹ್ಯಾಂತ್ರ ಪರಿಪೂರ್ಣ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಗುರುನಾಥ ಬಾಹ್ಯಾಂತ್ರ ಪರಿಪೂರ್ಣ ನೀನೆ ಸದೋದಿತ ಸಹಕಾರ ನಿಜವಸ್ತು ನೀನೆ ಅಖಂಡಿತ ಗುಹ್ಯ ತಿಳಿಯದೊ ನಿನ್ನ ಸದ್ಗುರು ಸಮರ್ಥ 1 

ಸೆರಗ ಸಿಲುಕದೆಂದು ತಿರುಗಿತು ವೇದ ಸರಸ್ವತಿ ಸ್ತುತಿಗೆ ತಾ ತೀರಲಿಲ್ಲ ಬೋಧ ವರಣಿಸಲಿಕ್ಕೆ ಶೇಷ ತಲೆಯು ಬಾಗಿದ ಮೊರೆ ಇಡುತಿಹುದೆಲ್ಲ ನಿನಗೆ ಗೋವಿಂದ 2 

ಋಷಿಮುನಿಗಳಿಗೆ ತಾ ಪೆಸರೊಡೆಯದು ತುಸು ಕೊರತೆಲ್ಲ ತಾ ಪಸರಿಸಿಹ್ಯದು ಮಸಿ ಮಣ್ಣಾಯಿತು ಲೋಕ ಹೆಸರಿಗೆ ಬಂದು ದೆಸೆಗೆಟ್ಟಾಯಿತು ಬಹಳ ಉಸುರೊಡಿಯೆಂದು 3 

ಮಾಡದ ಮಾಡಿತು ಲೋಕ ನೋಡೊ ನಿನಗಾಗಿ ಬಡದ ಭವಣೆಬಟ್ಟು ಹಿಡಿಯಲಿಕ್ಕೆ ಹೋಗಿ ಕೊಡಲಿಲ್ಲ ನಿಜಗುಟ್ಟು ಇವ್ಹನೀ ಅಡಗಿ ಯೋಗಿ 4 

ಇದೆ ಮುಂದಣುವಾದ ನನ್ನದೇನು ಪಾಡು ಸಾಧಿಸಿ ಸದ್ಗುರು ಕೃಪೆ ನೀನೆ ದಂiÀiಮಾಡು ಒದಗಿ ಮಹಿಪತಿ ನೀ ದಯದಿಂದ ನೋಡು ಸದಮಲ ಸುಖವಾದ ಸುಧಾರಸವ ಕೊಡು 5

****