ಕಾಖಂಡಕಿ ಶ್ರೀ ಮಹಿಪತಿರಾಯರು
ದತ್ತ ನಮ್ಮನಿ ದೈವ ಚಿತ್ತಮನದೊಳಗಿಹ್ಯ ಎತ್ತ ಹೋದರು ನಮ್ಮ ಹತ್ತಿಲಿಹನೊ 1
ನಿತ್ಯ ನಿಜ ಘನವಾಗಿ ಹೃತ್ಕಮಲದೊಳು ತಾಂ ಮುತ್ತಿನಂತೆ 2
ಗುತ್ತಳಿದು ಒಳಗ ತಾಂ ಪುಥ್ಥಳಿಯು ಹೊಳೆವ ಪರಿ ಮೊತ್ತವಾಗಿಹ್ಯ ಪೂರ್ಣ ನೆತ್ತಿವೊಳಗ 3
ದತ್ತವುಳ್ಳವನಿಗೆ ಹತ್ತಿಸಂಗಡ ಬಾಹ ವಿತ್ತ ಒಡಿವ್ಯಾಗೆ ತಾಂ ಕರ್ತುನಮ್ಮ 4
ದತ್ತಗಿಂದಧಿಕ ಮತ್ತೊಂದು ದೈವವು ಕಾಣೆ ಪೃಥ್ವಿಯೊಳು ಮಹಿಪತಿವಸ್ತು ಒಂದೆ 5
***