Showing posts with label ದಯದಿ ಪಾಲಿಸೋ ಜಯತೀರಥ ರಾಯಾ vyasa vittala DAYADI PAALISO JAYATEERATHA RAAYA JAYATEERTHA STUTIH. Show all posts
Showing posts with label ದಯದಿ ಪಾಲಿಸೋ ಜಯತೀರಥ ರಾಯಾ vyasa vittala DAYADI PAALISO JAYATEERATHA RAAYA JAYATEERTHA STUTIH. Show all posts

Saturday 6 November 2021

ದಯದಿ ಪಾಲಿಸೋ ಜಯತೀರಥ ರಾಯಾ ankita vyasa vittala DAYADI PAALISO JAYATEERATHA RAAYA JAYATEERTHA STUTIH


sung as keshava vittala ankita

kruti by vyasa vittala dasaru kallur subbanna dasaru

ಟೀಕಾಚಾರ್ಯರ ಸ್ತೋತ್ರ

check same devaranama in keshava vittala ankita also


ದಯದಿ ಪಾಲಿಸೋ ಜಯತೀರಥ ರಾಯಾ | 

ಅಕ್ಷೋಭ್ಯರ ತನಯಾ ಪ


ಅತ್ಯಂತ್ಹರುಷದಿ ಎತ್ತಾಗಿರುತಿರಲೂ ಶ್ರೀ |ಆನಂದ ತೀರಥರೂನಿತ್ಯ ಪಠಿಸುವೋ ಪುಸ್ತಕ ಹೊರುತಿರಲೂ |ಗುರುರಾಯರು ಪೇಳಿದತತ್ವ ಗ್ರಂಥವನೆ ಕಿವಿಯಲಿ ಕೇಳುತಲೀ | ತಲೆಯನು ತೂಗುತಲೀಮತ್ತೆ ಪುಟ್ಟಿದ್ಯೋ ಮಂಗಳವೇಡೆಯಲೀ | ಅತಿ ಮತಿವಂತರಲೀ 1


ದೇಶಪಾಂಡೆರಾ ಕೂಸಾಗಿ ಜನಿಸೀ | ಘನ ರಾವುತನೆನಿಸೀದೇಶ ದೇಶದೋಳ್ ಸೈನ್ಯವನೇ ಚರಿಸೀ | ಹಣವನ್ನೇ ಗಳಿಸೀವಾಸುಕಿಯೆಂಬೋ ಗುರುತನೆ ತಪ್ಪಿಸೀ | ನದಿಗೇ ನೀರಡಿಸೀಶ್ರೀಶನಾಜ್ಞೆಯೊಳಿವರನೆ ಕರೆತರಿಸೀ |ಶಿಖೆ ಸೂತ್ರವ ತೆಗೆಸೀ2


ಹಿಂಡು ಹಿಂಡು ಜನ ಅಂಡಲಿಯುತ ಬದೂ | ಅಕ್ಷೋಭ್ಯ ತೀರಥರಾಕಂಡು ಭೇಟಿಯಾ ಮಾಡುತಲೇ ನಿಂದೂ | ಧೋಂಡೋ ರಘುನಾಥನಹೆಂಡತಿ ಗಂಡನ ಕೂಡಿಸಬೇಕೆಂದೂ | ಸುಮ್ಮನೆ ಕರೆತಂದೂ - ಪ್ರಚಡ ಸರ್ಪನಾ ರೂಪವ ತಾಳ್ದಂದೂ ಭಯವ ಪಟ್ಟರಂದೂ 3


ಮಧ್ವ ಶಾಸ್ತ್ರಗಳನುದ್ಧರಿಸುತಲದನಾ | ಟೀಕೆಯನೇ ಮಾಡೀವಿದ್ವಜ್ಜನರಿಗೆ ತಿದ್ದಿಯೆ ಪೇಳುತಲೀ |ನಾನಾ ಬಗೆಯಿಂದಲಿಪದ್ಧತಿ ತಿಳಿಸಿದ ಗುರುರಾಯರು ನೀವು | ಯತಿವರ ಸುರಧೇನುಅದ್ವೈತರ ಗುರು ವಿದ್ಯಾರಣ್ಯರ | ಗೆದ್ದ ಸಿಂಹ ನೀನೂ 4


ಆಷಾಢ ಬಹುಳ ಪಂಚಮಿಯೂ ಬರುತಾ ಕಳೆಬರವನೆ ಬಿಡುತಾವ್ಯಾಸ ವಿಠ್ಠಲನ ಪಾದದಲೇ ನಿರುತಾ | ಮಳಖೇಡದೊಳುವಾಸಿಪನೆಂಬೋ ಬಲು ಪ್ರಖ್ಯಾತಾ |ನಿಜಗುಣ ಗಣನೀತಾಬ್ಯಾಸರದಲೆ ಕೊಂಡಾಡಿದರೆ ನಿತ್ಯಾ | ಇಷ್ಟಾರ್ಥವನಿತ್ತಾ 5

***



ದಯದಿ ಪಾಲಿಸೋ ಜಯತೀರಥ ರಾಯಾ | ಅಕ್ಷೋಭ್ಯರ ತನಯಾ ||pa||

ಅತ್ಯಂತ್ಹರುಷದಿ ಎತ್ತಾಗಿರುತಿರಲೂ ಶ್ರೀ |
ಆನಂದ ತೀರಥರೂನಿತ್ಯ ಪಠಿಸುವೋ ಪುಸ್ತಕ ಹೊರುತಿರಲೂ |
ಗುರುರಾಯರು ಪೇಳಿದತತ್ವ ಗ್ರಂಥವನೆ ಕಿವಿಯಲಿ ಕೇಳುತಲೀ |
ತಲೆಯನು ತೂಗುತಲೀಮತ್ತೆ ಪುಟ್ಟಿದ್ಯೋ ಮಂಗಳವೇಡೆಯಲೀ | ಅತಿ ಮತಿವಂತರಲೀ ||1||

ದೇಶಪಾಂಡೆರಾ ಕೂಸಾಗಿ ಜನಿಸೀ |
ಘನ ರಾವುತನೆನಿಸೀದೇಶ ದೇಶದೋಳ್ ಸೈನ್ಯವನೇ ಚರಿಸೀ |
ಹಣವನ್ನೇ ಗಳಿಸೀವಾಸುಕಿಯೆಂಬೋ ಗುರುತನೆ ತಪ್ಪಿಸೀ |
ನದಿಗೇ ನೀರಡಿಸೀಶ್ರೀಶನಾಜ್ಞೆಯೊಳಿವರನೆ ಕರೆತರಿಸೀ |ಶಿಖೆ ಸೂತ್ರವ ತೆಗೆಸೀ||2||

ಹಿಂಡು ಹಿಂಡು ಜನ ಅಂಡಲಿಯುತ ಬದೂ |
ಅಕ್ಷೋಭ್ಯ ತೀರಥರಾಕಂಡು ಭೇಟಿಯಾ ಮಾಡುತಲೇ ನಿಂದೂ |
ಧೋಂಡೋ ರಘುನಾಥನಹೆಂಡತಿ ಗಂಡನ ಕೂಡಿಸಬೇಕೆಂದೂ |
ಸುಮ್ಮನೆ ಕರೆತಂದೂ – ಪ್ರಚಡ ಸರ್ಪನಾ ರೂಪವ ತಾಳ್ದಂದೂ ಭಯವ ಪಟ್ಟರಂದೂ ||3||

ಮಧ್ವ ಶಾಸ್ತ್ರಗಳನುದ್ಧರಿಸುತಲದನಾ |
ಟೀಕೆಯನೇ ಮಾಡೀವಿದ್ವಜ್ಜನರಿಗೆ ತಿದ್ದಿಯೆ ಪೇಳುತಲೀ |
ನಾನಾ ಬಗೆಯಿಂದಲಿಪದ್ಧತಿ ತಿಳಿಸಿದ ಗುರುರಾಯರು ನೀವು |
ಯತಿವರ ಸುರಧೇನುಅದ್ವೈತರ ಗುರು ವಿದ್ಯಾರಣ್ಯರ | ಗೆದ್ದ ಸಿಂಹ ನೀನೂ||4||

ಆಷಾಢ ಬಹುಳ ಪಂಚಮಿಯೂ ಬರುತಾ ಕಳೆಬರವನೆ
ಬಿಡುತಾವ್ಯಾಸ ವಿಠ್ಠಲನ ಪಾದದಲೇ ನಿರುತಾ |
ಮಳಖೇಡದೊಳುವಾಸಿಪನೆಂಬೋ ಬಲು ಪ್ರಖ್ಯಾತಾ |
ನಿಜಗುಣ ಗಣನೀತಾಬ್ಯಾಸರದಲೆ ಕೊಂಡಾಡಿದರೆ ನಿತ್ಯಾ | ಇಷ್ಟಾರ್ಥವನಿತ್ತಾ ||5||
*****