..
kruti by radhabai
ದಯಮಾಡಿ ಬಾರೆನ್ನ ಗುರುವೇ ಮಂತ್ರಾಲಯ ಪ್ರಭುವೇ ಪ
ಧರೆಯೊಳು ಸುಜನರಾ ಪೊರೆಯಲೋಸುಗ ನೀನು
ವರ ಮಂತ್ರಾಲಯದೊಳು ಬಂದು ನಿಂದಿಹೆ ಗುರುವೇ 1
ಬಹು ವಿಧದಲಿ ನಿನ್ನ ಮಹಿಮೆಗಳ ಕೇಳೀ
ದೇಶ ದೇಶದಿ ಜನರು ಬಂದು ಕಾದಿಹರೋ2
ಕರೆದಾರೆ ಬರುವಂಥ ಕರುಣಸಾಗರ ನೀನು
ಪರಿ ಪರಿಸ್ತುತಿಸುವೆ ಕಾರುಣ್ಯ ಮೂರ್ತಿಯೆ 3
ಬೇಡಿದಳಾ ವರಗಳ ಕೊಡುವ ನೀನೆನುತಲಿ
ಧೃಡ ಭಕುತಿಯೊಳು ನಿನ್ನಡಿಗಳ ಸೇವಿ ಸುವರೋ 4
ಹಗಲು ಇರುಳು ನಿನ್ನ ಬಿಡದೆ ಸ್ತುತಿಸುವಂತೆ
ಮತಿಯ ಪಾಲಿಪುದು - ಶ್ರೀ ಗುರುರಾಘವೇಂದ್ರಾ 5
***