Showing posts with label ದಾನಧರ್ಮವ ಮಾಡಿ ಸುಖಿಯಾಗು ಮನವೆ ankita neleyadikeshava DAANA DHARMAVA MAADI SUKHIYAAGU MANAVE. Show all posts
Showing posts with label ದಾನಧರ್ಮವ ಮಾಡಿ ಸುಖಿಯಾಗು ಮನವೆ ankita neleyadikeshava DAANA DHARMAVA MAADI SUKHIYAAGU MANAVE. Show all posts

Thursday, 2 December 2021

ದಾನಧರ್ಮವ ಮಾಡಿ ಸುಖಿಯಾಗು ಮನವೆ ankita neleyadikeshava DAANA DHARMAVA MAADI SUKHIYAAGU MANAVE



ದಾನಧರ್ಮವ ಮಾಡಿ ಸುಖಿಯಾಗು ಮನವೆ ಪ


ಹೀನ ವೃತ್ತಿಯಲಿ ನೀ ಕೆಡಬೇಡ ಮನವೆ ಅ


ಎಕ್ಕನಾತಿ ಯಲ್ಲಮ್ಮ ಮಾರಿ ದುರ್ಗಿ ಚೌಡಿಯಅಕ್ಕರಿಂದಲಿ ಪೂಜೆ ಮಾಡಲೇಕೆಗಕ್ಕನೆಯೆ ಯಮನ ದೂತರೆಳೆದೊಯ್ಯುವಾಗಶಕ್ತೇರು ಬಿಡಿಸಿಕೊಂಡಾರೇನೊ ಮರುಳೆ 1


ಸಂಭ್ರಮದಲಿ ಒಂದ್ಹೊತ್ತು ನೇಮದೊಳಗಿದ್ದುತಂಬಿಟ್ಟಿನಾ ದೀಪ ಹೊರಲೇತಕೆಕೊಂಬು ಹೋತು ಕುರಿ ಕೋಣಗಳನ್ನು ಬಲಿಗೊಂಬದೊಂಬಿ ದೈವಗಳ ಭಜಿಸದಿರು ಮನವೆ2


ಚಿಗುರೆಲೆ ಬೇವಿನ ಸೊಪ್ಪುಗಳ ನಾರಸೀರೆಬಗೆಬಗೆಯಿಂದ ಶೃಂಗಾರ ಮಾಡಿನೆಗೆನೆಗೆದಾಡುತ ಕುಣಿಯುತಿರೆ ನಿನಗಿನ್ನುಮಿಗಿಲಾದ ಮುಕ್ತಿಯುಂಟೇ ಹುಚ್ಚು ಮನವೆ 3


ದಾನಧರ್ಮ ಪರೋಪಕಾರವ ಮಾಡುದೀನನಾಗಿ ನೀ ಕೆಡಬೇಡವೊಜ್ಞಾನವಿಲ್ಲದೆ ಹೀನ ದೈವವ ಭಜಿಸಿದರೆಏನುಂಟು ನಿನಗಿನ್ನು ಎಲೆ ಹುಚ್ಚು ಮನವೆ 4


ನರಲೋಕದಲಿ ಯಮನ ಬಾಧೆಯನು ಕಳೆಯಲುವರ ಪುಣ್ಯ ಕಥೆಗಳನು ಕೇಳುತಲಿಸಿರಿ ಕಾಗಿನೆಲೆಯಾದಿ ಕೇಶವನ ನೆರೆ ನಂಬಿಸ್ಥಿರ ಪದವಿಯನು ಪಡೆ ಹುಚ್ಚು ಮನವೆ5

***