..
ದಾಸಾರ್ಯರ ದಾಸರ ದಾಸ ನಾನು - ಬಾಡದೀಶ ಕಾಯ್ದುಕೊಳ್ಳೊ ಪ
ಗುಟ್ಟುಮಾಡಿಕೊಂಡಿರದೆ ಕಂಡವರಿಗೆ ಕಾರ್ಪಣ್ಯಪಟ್ಟು ಬಡವನಾದೆನಲ್ಲ - ಅಯ್ಯ ಕೈಗೊಟ್ಟು ರಕ್ಷಿಸುವರಿಲ್ಲ ಜನ್ಮ ಜನ್ಮಂಗಳಲಿಪುಟ್ಟುವಂತೆ ಮಾಡಬೇಡ ಮಾಧವ ಮನ್ನಿಸೊ ಎನ್ನ 1
ಮಡದಿ ಮಕ್ಕಳೆಂಬ ಪಾಶ ಮಮತೆ ಎನ್ನ ಕೊರಳಬಿಡದೆ ಸುತ್ತಿಕೊಂಡಿತಲ್ಲಯ್ಯಪಡೆದ ದ್ರವ್ಯವೆಲ್ಲ ವಸ್ತು ಕ್ಷೇತ್ರಂಗಳ ಕಾಣದೆ ನಿತ್ಯನಡೆದುದ ವಿಸ್ತರಿಸಲಾರೆ ನೀಲಮೇಘಶ್ಯಾಮ ನಿನ್ನ2
ಘೋರ ಸಂಸಾರವೆಂಬ ವಾರಿಧಿಯೊಳಗೆ ಬಿದ್ದುಪಾರಗಾಣದವನಾದೆನಲ್ಲಯ್ಯಧೀರಕರ್ತನಾದ ಬಾಡದಾದಿಕೇಶವೇಶ ಸರ್ವಸಾರಿದೆ ಸಲಹೊ ಎನ್ನುದ್ಧಾರಿ ಮುದ್ದುಕೃಷ್ಣ ನಿನ್ನ 3
***