Showing posts with label ದುರ್ಗಾ ದುರ್ಗೆಯೆ ಮಹ vijaya vittala suladi ದುರ್ಗಾದೇವೀ ಸ್ತೋತ್ರ ಸುಳಾದಿ DURGA DURGEYA MAHA suladi DURGADEVI STOTRA SULADI. Show all posts
Showing posts with label ದುರ್ಗಾ ದುರ್ಗೆಯೆ ಮಹ vijaya vittala suladi ದುರ್ಗಾದೇವೀ ಸ್ತೋತ್ರ ಸುಳಾದಿ DURGA DURGEYA MAHA suladi DURGADEVI STOTRA SULADI. Show all posts

Sunday, 8 December 2019

ದುರ್ಗಾ ದುರ್ಗೆಯೆ ಮಹ vijaya vittala suladi ದುರ್ಗಾದೇವೀ ಸ್ತೋತ್ರ ಸುಳಾದಿ DURGA DURGEYA MAHA suladi DURGADEVI STOTRA SULADI


1st Audio by Mrs. Nandini Sripad

ಶ್ರೀ ವಿಜಯದಾಸಾರ್ಯ ವಿರಚಿತ   ಶ್ರೀದುರ್ಗಾ ಸ್ತೋತ್ರ ಸುಳಾದಿ 

 ರಾಗ ಖರಹರಪ್ರಿಯ 

 ಧ್ರುವತಾಳ 

ದುರ್ಗಾ ದುರ್ಗೆಯೆ ಮಹಾ ದುಷ್ಟಜನ ಸಂಹಾರೆ
ದುರ್ಗಾಂತರ್ಗತ ದುರ್ಗೆ ದುರ್ಲಭೆ ಸುಲಭೆ
ದುರ್ಗಮವಾಗಿದೆ ನಿನ್ನ ಮಹಿಮೆ, ಬೊಮ್ಮ
ಭರ್ಗಾದಿಗಳಿಗೆಲ್ಲ ಗುಣಿಸಿದರು
ಸ್ವರ್ಗ ಭೂಮಿ ಪಾತಾಳ ಸಮಸ್ತ ವ್ಯಾಪುತ ದೇವಿ
ವರ್ಗಕ್ಕೆ ಮೀರಿದ ಬಲು ಸುಂದರೀ
ದುರ್ಗಣದವರ ಬಾಧೆ ಬಹಳವಾಗಿದೆ ತಾಯಿ
ದುರ್ಗತಿಹರೆ ನಾನು ಪೇಳುವದೇನು
ದುರ್ಗಂಧವಾಗಿದೆ ಸಂಸ್ಮೃತಿ ನೋಡಿದರೆ
ನಿರ್ಗಮನ ನಾ ಕಾಣೆನಮ್ಮ ಮಂಗಳಾಂಗೆ
ದುರ್ಗೆ ಹೇ ದುರ್ಗೆ ಮಹಾದುರ್ಗೆ ಭೂದುರ್ಗೆ ವಿಷ್ಣು -
ದುರ್ಗೆ ದುರ್ಜಯೆ ದುರ್ಧರ್ಷೆ ಶಕ್ತಿ
ದುರ್ಗ ಕಾನನ ಗಹನ ಪರ್ವತ ಘೋರ ಸರ್ಪ
ಗರ್ಗರ ಶಬ್ದ ವ್ಯಾಘ್ರ ಕರಡಿ ಮೃತ್ಯು
ವರ್ಗ ಭೂತ ಪ್ರೇತ ಪೈಶಾಚಿ ಮೊದಲಾದ
ದುರ್ಗುಣ ಸಂಕಟ ಪ್ರಾಪ್ತವಾಗೆ
ದುರ್ಗಾ ದುರ್ಗೆ ಎಂದು ಉಚ್ಚಸ್ವರದಿಂದ
ನಿರ್ಗಳಿತನಾಗಿ ಒಮ್ಮೆ ಕೂಗಿದರೂ
ಸ್ವರ್ಗಾಪವರ್ಗದಲ್ಲಿ ಹರಿಯೊಡನೆ ಇದ್ದರು
ಸುರ್ಗಣ ಜಯಜಯವೆಂದು ಪೊಗಳುತಿರೆ
ಕರ್ಗಳಿಂದಲಿ ಎತ್ತಿ ಸಾಕುವ ಸಾಕ್ಷಿಭೂತೆ
ನೀರ್ಗುಡಿದಂತೆ ಲೋಕಲೀಲೆ ನಿನಗೆ
ಸ್ವರ್ಗಂಗಾಜನಕ ನಮ್ಮ ವಿಜಯವಿಠಲ ನಂಘ್ರಿ
ದುರ್ಗಾಶ್ರಯಮಾಡಿ ಬದುಕುವಂತೆ ಮಾಡು ||೧||

 ಮಟ್ಟತಾಳ 

ಅರಿದರಾಂಕುಶ ಶಕ್ತಿ ಪರಶು ನೇಗಿಲು ಖಡ್ಗ
ಸರಸಿಜ ಗದೆ ಮುದ್ಗರ ಚಾಪ ಮಾರ್ಗಣ
ವರ ಅಭಯ ಮುಸಲ ಪರಿಪರಿ ಆಯುಧವ
ಧರಿಸಿ ಮೆರೆವ ಲಕುಮಿ ಸರಸಿಜಭವ ರುದ್ರ
ಸರುವ ದೇವತೆಗಳ ಕರುಣಾಪಾಂಗದಲ್ಲಿ
ನಿರೀಕ್ಷಿಸಿ ಅವರವರ ಸ್ವರೂಪಸುಖ ಕೊಡುವ
ಸಿರಿ ಭೂಮಿದುರ್ಗೆ ಸರುವೋತ್ತಮ
ನಮ್ಮ ವಿಜಯವಿಠಲ ನಂಘ್ರಿ
ಪರಮ ಭಕುತಿಯಿಂದ ಸ್ಮರಿಸುವ ಜಗಜ್ಜನನಿ ||೨||

 ತ್ರಿಪುಟತಾಳ 

ಸ್ತುತಿ ಮಾಡುವೆ ನಿನ್ನ ಕಾಳಿ ಮಹಾ ಕಾಳಿ
ಉನ್ನತ ಬಾಹು ಕರಾಳವದನೆ ಚಂದಿರೆಮುಖೆ
ಧೃತಿ ಶಾಂತಿ ಬಹುರೂಪೆ ರಾತ್ರಿ ರಾತ್ರಿಂ ಚರಣೆ
ಸ್ಥಿತಿಯೆ ನಿದ್ರಾ ಭದ್ರಾ ಭಕ್ತವತ್ಸಲೆ ಭವ್ಯೆ
ಚತುರಷ್ಟದ್ವಿಹಸ್ತೆ ಹಸ್ತಿ ಹಸ್ತಿಗಮನೆ
ಅದ್ಭುತ ಪ್ರಬಲೆ ಪ್ರವಾಸೆ ದುರ್ಗಾರಣ್ಯವಾಸೆ
ಕ್ಷಿತಿಭಾರಹರಣೆ ಕ್ಷೀರಾಬ್ಧಿತನಯೆ ಸ -
ದ್ಗತಿ ಪ್ರದಾತೆ ಮಾಯಾ ಶ್ರೀಯೆ ಇಂದಿರೆ ರಮೆ
ದಿತಿಜಾತ ನಿಗ್ರಹೆ ನಿರ್ಧೂತ ಕಲ್ಮಷೆ
ಪ್ರತಿಕೂಲ ಭೇದೆ ಪೂರ್ಣಬೋಧೆ ರೌದ್ರೆ
ಅತಿಶಯ ರಕ್ತ ಜಿಹ್ವಾಲೋಲೆ ಮಾಣಿಕ್ಯ ಮಾಲೆ
ಜಿತಕಾಮೆ ಜನನ ಮರಣ ರಹಿತೆ ಖ್ಯಾತೆ
ಘೃತ ಪಾತ್ರ ಪರಮಾನ್ನ ತಾಂಬೂಲಹಸ್ತೆ
ಸುವ್ರತೆ ಪತಿವ್ರತೆ ತ್ರಿನೇತ್ರೆ ರಕ್ತಾಂಬರೆ
ಶತಪತ್ರನಯನೆ ನಿರುತ ಕನ್ಯೆ ಉದಯಾರ್ಕ
ಶತಕೋಟಿ ಸನ್ನಿಭೆ ಹರಿ ಆಂಕಸಂಸ್ಥೆ
ಶ್ರುತಿತತಿನುತೆ ಶುಕ್ಲ ಶೋಣಿತ ರಹಿತೆ
ಅಪ್ರತಿರಹತೆ ಸರ್ವದಾ ಸಂಚಾರಿಣಿ ಚತುರೆ
ಚತುರ ಕಪರ್ದಿಯೆ ಅಂಭ್ರಣಿ ಹ್ರೀಉತ್ಪತ್ತಿ 
ಸ್ಥಿತಿ ಲಯ ಕರ್ತೆ ಶುಭ್ರ ಶೋಭನ ಮೂರ್ತೆ
ಪತಿತಪಾವನೆ ಧನ್ಯೆ ಸರ್ವೌಷಧಿಯಲಿದ್ದು
ಹತಮಾಡು ಕಾಡುವ ರೋಗಂಗಳಿಂದ
ಕ್ಷಿತಿಯೊಳು ಸುಖದಲ್ಲಿ ಬಾಳುವ ಮತಿಯಿತ್ತು
ಸತತ ಕಾಯಲಿಬೇಕು ದುರ್ಗೆ ದುರ್ಗೆ
ಚ್ಯುತದೂರ ವಿಜಯವಿಠ್ಠಲ ರೇಯನ ಪ್ರೀಯೆ
ಕೃತಾಂಜಲಿಯಿಂದಲಿ ತಲೆಬಾಗಿ ನಮಿಪೆ ||೩||

 ಮಟ್ಟತಾಳ 

ಶ್ರೀ ಲಕ್ಷ್ಮೀ ಕಮಲಾ ಪದ್ಮಾ ಪದ್ಮಿನಿ ಕಮ -
ಲಾಲಯೆ ರಮಾ ವೃಷಾಕಪಿ ಧನ್ಯೆ ವೃದ್ಧಿ ವಿ -
ಶಾಲ ಯಜ್ಞಾ ಇಂದಿರೆ ಹಿರಣ್ಯ ಹರಿಣಿ
ವಾಲಯ ಸತ್ಯನಿತ್ಯಾನಂದ ತ್ರಾಹಿ
ಸುಶೀಲೆ ಸುಗಂಧ ಸುಂದರಿ ವಿದ್ಯಾ ಸುಶೀಲೆ
ಸುಲಕ್ಷಣ ದೇವಿ ನಾನಾ ರೂಪಗಳಿಂದ ಮೆರೆವೆ ಮೃತ್ಯುನಾಶೆ
ಓಲಗಕೊಡು ಸಂತರ ಸನ್ನಿಧಿಯಲ್ಲಿ
ಕಾಲಕಾಲಕೆ ಎನ್ನ ಭಾರ ವಹಿಸುವ ತಾಯಿ
ಮೇಲು ಮೇಲು ನಿನ್ನ ಶಕ್ತಿ ಕೀರ್ತಿ ಬಲು
ಕೇಳಿ ಕೇಳಿ ಬಂದೆ ಕೇವಲ ಈ ಮನ
ಗಾಳಿಯಂತೆ ಪರದ್ರವ್ಯಕ್ಕೆ ಪೋಪುದು
ಏಳಲ ಮಾಡದೆ ಉದ್ಧಾರವ ಮಾಡುವ
ಕೈಲಾಸಪುರದಲ್ಲಿ ಪೂಜೆಗೊಂಬ ದೇವಿ
ಮೂಲ ಪ್ರಕೃತಿ ಸರ್ವ ವರ್ಣಾಭಿಮಾನಿನಿ
ಪಾಲಸಾಗರಶಾಯಿ ವಿಜಯವಿಠ್ಠಲ ನೊಳು
ಲೀಲೆ ಮಾಡುವ ನಾನಾಭರಣೆ ಭೂಷಣೆ ಪೂರ್ಣೆ ||೪||

 ಆದಿತಾಳ 

ಗೋಪಿನಂದನೆ ಮುಕ್ತೆ ದೈತ್ಯಸಂತತಿ ಸಂ -
ತಾಪವ ಕೊಡುತಿಪ್ಪ ಮಹಾಕಠೋರೆ ಉಗ್ರೆ
ರೂಪೆ ವೈಲಕ್ಷಣೆ ಅಜ್ಞಾನಕಭಿಮಾನಿನಿ
ತಾಪತ್ರಯ ವಿನಾಶೆ ಓಂಕಾರೆ ಹೂಂಕಾರೆ
ಪಾಪಿ ಕಂಸಗೆ ಭಯ ತೋರಿದೆ ಬಾಲಲೀಲೆ
ವ್ಯಾಪುತೆ ಧರ್ಮ ಮಾರ್ಗ ಪ್ರೇರಕೆ ಅಪ್ರಾಕೃತೆ
ಸ್ವಪ್ನದಲಿ ನಿನ್ನ ನೆನೆಸಿದ ಶರಣನಿಗೆ
ಅಪಾರವಾಗಿದ್ದ ವಾರಿಧಿಯಂತೆ ಮಹಾ
ಆಪತ್ತು ಬಂದಿರಲು ಹಾರಿ ಪೋಗುವ ಸಪ್ತ -
ದ್ವೀಪ ನಾಯಿಕೆ ನರಕ ನಿರ್ಲೇಪೆ ತಮೋಗುಣದ
ವ್ಯಾಪಾರ ಮಾಡಿಸಿ ಭಕ್ತಜನಕೆ ಪುಣ್ಯ
ಸೋಪಾನ ಮಾಡಿಕೊಡುವ ಸೌಭಾಗ್ಯವಂತೆ ದುರ್ಗೆ
ಪ್ರಾಪುತವಾಗಿ ಎನ್ನ ಮನದಲ್ಲಿ ನಿಂದು ದುಃಖ
ಕೂಪದಿಂದಲಿ ಎತ್ತಿ ಕಡೆಮಾಡು ಜನ್ಮಂಗಳ
ಸೌಪರ್ಣಿ ಮಿಗಿಲಾದ ಸತಿಯರು ನಿತ್ಯ ನಿನ್ನ
ಆಪಾದಮೌಳಿ ತನಕ ಭಜಿಸಿ ಭವ್ಯರಾದರು
ನಾ ಪೇಳುವುದೇನು ಪಾಂಡವರ ಮನೋಭೀಷ್ಟೆ
ಈ ಪಾಂಚಭೌತಿಕದಲ್ಲಿ ಆವ ಸಾಧನ ಕಾಣೆ
ಶ್ರೀಪತಿನಾಮ ಒಂದೇ ಜಿಹ್ವಾಗ್ರದಲಿ ನೆನೆವ
ಔಪಾಸನ ಕೊಡು ರುದ್ರಾದಿಗಳ ವರದೆ
ತಾಪಸಜನ ಪ್ರಿಯ ವಿಜಯವಿಠ್ಠಲ ಮೂರ್ತಿಯ
ಶ್ರೀಪಾದಾರ್ಚನೆ ಮಾಳ್ಪ ಶ್ರೀ ಭೂ ದುರ್ಗಾ ವರ್ಣಾಶ್ರಯೆ ||೫||

 ಜತೆ 

ದುರ್ಗೆ ಹಾ ಹೇ ಹೋ ಹಾ ಹಾ ದುರ್ಗೆ ಮಂಗಳ ದುರ್ಗೆ |
ದುರ್ಗತಿ ಕೊಡದಿರು ನಮ್ಮ ವಿಜಯವಿಠ್ಠಲ ಪ್ರಿಯೆ ||

********


ಶ್ರೀದುರ್ಗಾದೇವೀ ಸ್ತೋತ್ರ ಸುಳಾದಿ (ಶ್ರೀ ವಿಜಯದಾಸರು ಕೃತ)

ತಾಳ – ಧ್ರುವ

ದುರ್ಗಾ ದುರ್ಗೆಯೆ ಮಹದುಷ್ಟಜನ ಸಂಹಾರೆ
ದುರ್ಗಾಂತರ್ಗತ ದುರ್ಗೆ ದುರ್ಲಭೆ ಸುಲಭೆ
ದುರ್ಗಮವಾಗಿದೆ ನಿನ್ನ ಮಹಿಮೆ ಬೊಮ್ಮ
ಭರ್ಗಾದಿಗಳಿಗೆಲ್ಲ ಗುಣಿಸಿದರೂ
ಸ್ವರ್ಗ ಭೂಮಿ ಪಾತಾಳ ವ್ಯಾಪುತ ದೇವಿ
ವರ್ಗಕ್ಕೆ ಮೀರಿದ ಬಲು ಸುಂದರೀ
ದುರ್ಗಣದವರ ಬಾಧೆ ಬಹಳವಾಗಿದೆ ತಾಯಿ
ದುರ್ಗತಿಹಾರೆ ನಾನು ಪೇಳುವುದೇನು
ದುರ್ಗಂಧವಾಗಿದೆ ಸಂಸೃತಿ ನೋಡಿದರೆ
ನಿರ್ಗಮ ನಾ ಕಾಣೆನಮ್ಮ ಮಂಗಳಾಂಗೆ
ದುರ್ಗೆ ಹೆ ದುರ್ಗೆ ಮಹಾ ದುರ್ಗೆ ಭೂದುರ್ಗೆ ವಿಷ್ಣು
ದುರ್ಗೆ ದುರ್ಜಯ ದುರ್ಧಕ್ಷೆ ಶಕ್ತಿ
ದುರ್ಗಕಾನನ ಗಹನ ಪರ್ವತಘೋರ ಸರ್ಪ
ಗರ್ಗರ ಶಬ್ದ ವ್ಯಾಘ್ರ ಕರಡಿ ಮೃತ್ಯು
ವರ್ಗ ಭೂತ ಪ್ರೇತ ಪೈಶಾಚಿ ಮೊದಲಾದ
ದುರ್ಗಣ ಸಂಕಟ ಪ್ರಾಪ್ತವಾಗೆ
ದುರ್ಗಾದುರ್ಗೆ ಎಂದು ಉಚ್ಚಸ್ವರದಿಂದ
ನಿರ್ಗಳಿತವಾಗಿ ಒಮ್ಮೆ ಕೂಗಿದರೂ
ಸ್ವರ್ಗಾಪವರ್ಗದಲ್ಲಿ ಹರಿಯೊಡನೆ ಇದ್ದರೂ
ಸುರ್ಗಣ ಜಯ ಜಯವೆಂದು ಪೊಗಳುತಿರೆ
ಕರ್ಗಳಿಂದಲಿ ಎತ್ತಿ ಸಾಕುವ ಸಾಕ್ಷಿ ಭೂತೆ
ನಿರ್ಗುಡಿದಂತೆ ಲೋಕ ಲೀಲೆ ನಿನಗೆ
ಸ್ವರ್ಗಂಗಾಜನಕ ನಮ್ಮ ವಿಜಯ ವಿಠ್ಠಲನಂಘ್ರಿ
ದುರ್ಗಾಶ್ರಮ ಮಾಡಿ ಬದುಕುವಂತೆ ಮಾಡು || ೧ ||

ತಾಳ – ಮಟ್ಟ

ಅರಿದರಾಂಕುಶ ಶಕ್ತಿ ಪರಶು ನೇಗಲಿಖಡ್ಗ
ಸರಸಿಜ ಗದೆ ಮುದ್ಗರ ಚಾಪ ಮಾರ್ಗಣ
ವರ ಅಭಯ ಮುಸಲ ಪರಿ ಪರಿ ಆಯುಧವ
ಧರಿಸಿ ಮೆರೆವ ಲಕುಮಿ ಸರಸಿಜ ಭವ ರುದ್ರ
ಸರುವ ದೇವತೆಗಳ ಕರುಣಾಪಾಂಗದಲ್ಲಿ
ನಿರೀಕ್ಷಿಸಿ ಅವರವರ ಸ್ವರೂಪ ಸುಖಕೊಡುವ
ಸಿರಿಭೂಮಿ ದುರ್ಗಾ ಸರ್ವೋತ್ತಮ ನಮ್ಮ
ವಿಜಯ ವಿಠ್ಠಲನಂಘ್ರಿ
ಪರಮ ಭಕುತಿಯಿಂದ ಸ್ಮರಿಸುವ ಜಗಜ್ಜನನಿ || ೨ ||

ತಾಳ -ತ್ರಿವಿಡಿ

ಸ್ತುತಿ ಮಾಡುವೆ ನಿನ್ನ ಕಾಳಿ ಮಹಾಕಾಳಿ ಉ
ನ್ನತ ಬಾಹು ಕರಾಳವದನೆ ಚಂದಿರೆ ಮುಖೆ
ಧೃತಿ ಶಾಂತಿ ಬಹುರೂಪೆ ರಾತ್ರಿ ರಾತ್ರಿ ಚರಣೆ
ಸ್ಥಿತಿಯೆ ನಿದ್ರಾಭದ್ರೆ ಭಕ್ತವತ್ಸಲೇ ಭವ್ಯೇ
ಚತುರಷ್ಟ ದ್ವಿಹಸ್ತೆ ಹಸ್ತಿ ಹಸ್ತಿ ಗಮನೆ ಅ
ದ್ಭುತ ಪ್ರಬಲೆ ಪ್ರವಾಸೆ ದುರ್ಗಾರಣ್ಯವಾಸೆ
ಕ್ಷಿತಿಭಾರಹರಣೆ ಕ್ಷೀರಾಬ್ಧಿ ತನಯೆ ಸ
ದ್ಗತಿ ಪ್ರದಾತೆ ಮಾಯಾ ಶ್ರೀಯೆ ಇಂದಿರೆ ರಮೆ
ದಿತಿ ಜಾತೆ ನಿಗ್ರಹೆ ನಿರ್ಧೂತ ಕಲ್ಮಷೆ
ಪ್ರತಿಕೂಲ ಭೇದೆ ಪೂರ್ಣಬೋಧೆ ರೌದ್ರೇ
ಅತಿಶಯ ರಕ್ತ ಜಿಹ್ವಾಲೋಲೆ ಮಾಣಿಕ್ಯಮಾಲೆ
ಜಿತಕಾಮೆ ಜನನ ಮರಣ ರಹಿತ ಖ್ಯಾತೆ
ಘೃತ ಪಾತ್ರ ಪರಮಾನ್ನ ತಾಂಬೂಲ ಹಸ್ತೆ ಸು
ವ್ರತೆ ಪತಿವ್ರತೆ ತ್ರಿನೇತ್ರೆ ರಕ್ತಾಂಬರೆ
ಶತಪತ್ರ ನಯನೆ ನಿರುತಕನ್ಯೇ ಉದಯಾರ್ಕ
ಶತಕೋಟಿ ಸನ್ನಿಭೆ ಹರಿಯಾಂಕಸಂಸ್ಥೆ
ಶ್ರುತಿತತಿನುತೆ ಶುಕ್ಲ ಶೋಣಿತ ರಹಿತೆ ಅ
ಪ್ರತಿಹತೆ ಸರ್ವದಾ ಸಂಚಾರಿಣಿ ಹ್ರೀ
ಉತ್ಪತ್ತಿ ಸ್ಥಿತಿಲಯ ಕರ್ತೆ ಶುಭ್ರಶೋಭನ ಮೂರ್ತೆ
ಪತಿತಪಾವನೆ ರನ್ನೆ ಸರ್ವೋಷಧಿಯಲಿದ್ದು
ಹತಮಾಡು ಕಾಡುವ ರೋಗಗಳಿಂದ
ಕ್ಷಿತಿಯೊಳು ಸುಖದಲ್ಲಿ ಬಾಳುವ ಮತಿಯಿತ್ತು
ಸತತ ಕಾಯಲಿ ಬೇಕು ದುರ್ಗೇ ದುರ್ಗೇ
ಚ್ಯುತದೂರ ವಿಜಯ ವಿಠ್ಠಲರೇಯನ ಪ್ರೀಯೆ
ಕೃತಾಂಜಲಿಯಿಂದಲಿ ತಲೆಬಾಗಿ ನಮಿಸುವೆ || ೩ ||

ತಾಳ – ಅಟ್ಟ

ಶ್ರೀಲಕ್ಷ್ಮೀಕಮಲಾ ಪದ್ಮಾಪದ್ಮಿನಿ ಕಮ
ಲಾಲಯೆ ರಮಾ ವೃಷಾಕಪಿ ಧನ್ಯಾವೃದ್ಧಿವಿ
ಶಾಲಾ ಯಜ್ಞಾ ಇಂದಿರೆ ಹಿರಣ್ಯ ಹರಿಣಿ
ವಾಲಯ ಸತ್ಯ ನಿತ್ಯಾನಂದ ತ್ರಯಿ ಸುಧಾ
ಶೀಲೆ ಸುಗಂಧ ಸುಂದರಿ ವಿದ್ಯಾಸುಶೀಲೆ
ಸುಲಕ್ಷಣ ದೇವಿ ನಾನಾ ರೂಪಂಗಳಿಂದ ಮೆರೆವ ಮೃತ್ಯುನಾಶೆ
ವಾಲಗಕೊಡು ಸಂತರ ಸನ್ನಿಧಿಯಲ್ಲಿ
ಕಾಲ ಕಾಲಕೆ ಎನ್ನ ಭಾರ ವಹಿಸುವ ತಾಯಿ
ಮೇಲು ಮೇಲು ನಿನ್ನ ಶಕ್ತಿ ಕೀರ್ತಿ ಬಲು
ಕೇಳಿ ಕೇಳಿ ಬಂದೆ ಕೇವಲ ಈ ಮನ
ಘಾಳಿಯಂತೆ ಪರದ್ರವ್ಯಕ್ಕೆ ಪೊಪುದು
ಏಳಲ ಮಾಡದೆ ಉದ್ಧಾರ ಮಾಡುವ
ಕೈಲಾಸಪುರದಲ್ಲಿ ಪೂಜೆಗೊಂಬ ದೇವಿ
ಮೂಲಪ್ರಕೃತಿ ಸರ್ವ ವರ್ಣಾಭಿಮಾನಿನಿ
ಪಾಲಸಾಗರಶಾಯಿ ವಿಜಯ ವಿಠ್ಠಲನೊಳು
ಲೀಲೆ ಮಾಡುವ ನಾನಾಭರಣೆ ಭೂಷಣೆ ಪೂರ್ಣೆ || ೪ ||

ತಾಳ – ಆದಿ

ಗೋಪಿನಂದನೆ ಮುಕ್ತೆ ದೈತ್ಯ ಸಂತತಿಗೆ ಸಂ
ತಾಪವ ಕೊಡುತಿಪ್ಪ ಮಹಾಕಠೋರೆ ಉಗ್ರ
ರೂಪ ವೈಲಕ್ಷಣೆ ಅಜ್ಞಾನಕ್ಕಭಿಮಾನಿನಿ
ತಪತ್ರಯ ವಿನಾಶ ಓಂಕಾರೆ ಹೂಂಕಾರೆ
ಪಾಪಿ ಕಂಸಗೆ ಭಯ ತೋರಿದೆ ಬಾಲ ಲೀಲೆ
ವ್ಯಾಪುತ ಧರ್ಮಮಾರ್ಗ ಪ್ರೇರಣೆ ಅಪ್ರಾಕೃತೆ
ಸ್ವಾಪದದಲಿ ನಿನ್ನ ನೆನೆಸಿದ ಶರಣನಿಗೆ
ಅಪಾರವಾಗಿದ್ದ ವಾರಿಧಿಯಂತೆ ಮಹಾ
ಆಪತ್ತು ಬಂದಿರಲು ಹಾರೆ ಪೋಗೋವು ಸಪ್ತ
ದ್ವೀಪ ನಾಯಿಕೆ ನರಕ ನಿರ್ಲೇಪೆ ತಮೋಗುಣದ
ವ್ಯಾಪಾರ ಮಾಡಿಸಿ ಭಕ್ತ ಜನಕೆ ಪುಣ್ಯ
ಸೋಪಾನ ಮಾಡಿಕೊಡುವ ಸೌಭಾಗ್ಯವಂತೆ ದುರ್ಗೆ
ಪ್ರಾಪುತವಾಗಿ ಎನ್ನ ಮನದಲಿ ನಿಂದು ದುಃಖ
ಕೂಪದಿಂದಲಿ ಎತ್ತಿ ಕಡೆ ಮಾಡು ಜನ್ಮಂಗಳ
ಸೌಪರ್ಣಿ ಮಿಗಿಲಾದ ಸತಿಯರು ನಿತ್ಯ ನಿನ್ನ
ಆಪಾದ ಮೌಳಿತನಕ ಭಜಿಸಿ ಭವ್ಯರಾದರು
ನಾ ಪೇಳುವದೇನು ಪಾಂಡವರ ಮನೋಭಿಷ್ಟೆ
ಈ ಪಂಚ ಭೌತಿಕದಲ್ಲಿ ಆವ ಸಾಧನೆ ಕಾಣೇ
ಶ್ರೀಪತಿ ನಾಮ ಒಂದೇ ಜಿಹ್ವಾಗ್ರದಲಿ ನೆನೆವ
ಔಪಾಸನ ಕೊಡು ರುದ್ರಾದಿಗಳ ವರದೇ
ತಾಪಸ ಜನಪ್ರೀಯ ವಿಜಯವಿಠ್ಠಲ ಮೂರ್ತಿಯ
ಶ್ರೀಪಾದಾರ್ಚನೆ ಮಾಳ್ಪಾ ಶ್ರೀಭೂದುರ್ಗಾ ವರ್ಣಿಶ್ರಯೆ || ೫ ||

ಜತೆ

ದುರ್ಗೆ ಹಾ ಹೇ ಹೋ ಹಾಃ ದುರ್ಗೆ ಮಂಗಳ ದುರ್ಗೆ
ದುರ್ಗೆತಿ ಕೊಡದಿರು ವಿಜಯವಿಠ್ಠಲಪ್ರೀಯೆ || ೬ ||
*********